ETV Bharat / state

ಅಪರೂಪದ ಬಾಂಬೆ ಬ್ಲಡ್​​ ಗ್ರೂಪ್​ ಹೊಂದಿದ್ದ ಗರ್ಭಿಣಿ ಶಸ್ತ್ರ ಚಿಕಿತ್ಸೆ ಯಶಸ್ವಿ - ವಿರಳವಾದ ಬ್ಲಡ್​ ಗ್ರೂಪ್

ಅತಿ ವಿರಳವಾದ ಬ್ಲಡ್​ ಗ್ರೂಪ್​ ಹೊಂದಿದ್ದ ಗರ್ಭಿಣಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ ಮೆಗ್ಗಾನ್​ ಆಸ್ಪತ್ರೆ ವೈದ್ಯರು.

ಬಾಂಬೆ ಬ್ಲಡ್​​ ಗ್ರೂಪ್​ ಹೊಂದಿದ್ದ ಗರ್ಭಿಣಿಯ ಶಸ್ತ್ರ ಚಿಕಿತ್ಸೆ ಯಶಸ್ವಿ

author img

By ETV Bharat Karnataka Team

Published : Nov 17, 2023, 9:50 PM IST

ಶಿವಮೊಗ್ಗ: ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲೇ ಅಪರೂಪವಾದ 'ಬಾಂಬೆ ಬ್ಲಡ್ ಗ್ರೂಪ್' ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ನಡೆಸಿ ಮಹಿಳೆಯ ಜೀವ ಉಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೆ ಜೋಗದ ಬೇಬಿ(31) ಎಂಬುವವರು ಹೊಟ್ಟೆ ನೋವು ಹೆಚ್ಚಾದ್ದರಿಂದ ನ.12 ರಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆಗೆ ಮುಂದಾಗಿದ್ದಾರೆ. ಈ ವೇಳೆ, ಅವರು ಒಂದೂವರೆ ತಿಂಗಳ ಗರ್ಭಿಣಿಯಾಗಿರುವುದು ಕಂಡು ಬಂದಿರುತ್ತದೆ. ಕೂಲಂಕಷವಾಗಿ ತಪಾಸಣೆ ನಡೆಸಿದ ವೈದ್ಯರಿಗೆ ಗರ್ಭಕೋಶದ ಬದಲು ಗರ್ಭನಾಳದಲ್ಲಿ ಗರ್ಭ ಧರಿಸಿರುವುದು ಅಂದರೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಎಂದು ತಿಳಿದು ಬಂದಿರುತ್ತದೆ. ಇವರು ಆಸ್ಪತ್ರೆಗೆ ಬಂದ ವೇಳೆ ತೀವ್ರ ತರಹದ ಆಘಾತಕ್ಕೊಳಗಾಗಿದ್ದು, ಅವರ ರಕ್ತ ತಪಾಸಣೆ ಮತ್ತು ಇತರ ಪರೀಕ್ಷೆಗಳನ್ನು ನಡೆಸಿದಾಗ ಹಿಮೋಗ್ಲೊಬಿನ್ ಪ್ರಮಾಣ 2.5 ಗ್ರಾಂ ಮತ್ತು ಬಿಪಿ 80/50 ಇದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಾ ಅರೆಪ್ರಜ್ಞಾವಸ್ಥೆಯಲ್ಲಿ ಇರುತ್ತಾರೆ.

ಸ್ಕ್ಯಾನಿಂಗ್‍ನಲ್ಲಿ ಗರ್ಭನಾಳದಲ್ಲಿ ಧರಿಸಿರುವ ಗರ್ಭವು ತುಂಡಾಗಿರುವುದು(ರಪ್ಚರಡ್ ಎಕ್ಟೋಪಿಕ್) ಕಂಡು ಬಂದಿರುತ್ತದೆ. ತಕ್ಷಣ ಗರ್ಭಿಣಿಯನ್ನು ಪ್ರಸೂತಿ ಐಸಿಯು ವಿಭಾಗಕ್ಕೆ ಸ್ಥಳಾಂತರಿಸಲಾಗಿದೆ. ನಂತರ ಬೇಬಿ ಅವರ ರಕ್ತ ಪರೀಕ್ಷಿಸಿದಾಗ ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದ ಬಾಂಬೆ ಬ್ಲಡ್ ಗ್ರೂಪ್ ಇರುವುದು ಖಚಿತಗೊಂಡಿರುತ್ತದೆ. ಆಕೆಗೆ ಅತಿ ಅವಶ್ಯಕವಾಗಿ 4 ರಿಂದ 5 ಯುನಿಟ್‍ಗಳಷ್ಟು ರಕ್ತದ ಅವಶ್ಯಕತೆ ಕಂಡು ಬಂದಿರುತ್ತದೆ. ಆ ಸಮಯದಲ್ಲಿ ವೈದ್ಯರುಗಳ ಸಮಯ ಪ್ರಜ್ಞೆಯಿಂದ ಡಾ.ಲೇಪಾಕ್ಷಿ ಬಿ.ಜಿ ಮತ್ತು ಡಾ.ಅಶ್ವಿನಿ ವೀರೇಶ್ ತಂಡದ ಸತತ ಪ್ರಯತ್ನ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿದ್ದನಗೌಡ ಪಿ ಇವರ ಮಾರ್ಗದರ್ಶನದಲ್ಲಿ ಈ ಅತೀ ವಿರಳ ರಕ್ತದ ಗುಂಪಿನ ದಾನಿಗಳನ್ನು ಹುಡುಕಿ, ರಕ್ತ ಸಂಗ್ರಹಿಸಿ ಗರ್ಭಿಣಿಗೆ ನೀಡಲಾಗಿದೆ.

ದಾನಿಗಳಿಂದ ರಕ್ತ ಪಡೆದು ಶಸ್ತ್ರ ಚಿಕಿತ್ಸೆ: ವಿಜಯನಗರ ಜಿಲ್ಲೆಯ ಕೊಟ್ಟೂರು, ದಾವಣಗೆರೆ ಜಿಲ್ಲೆಯ ಮಾಯಕೊಂಡದಿಂದ ಇಬ್ಬರು ರಕ್ತದಾನಿಗಳು ಹಾಗೂ ಸಂಕಲ್ಪ ಫೌಂಡೇಷನ್, ಬೆಂಗಳೂರು ಇವರ ಸಹಾಯದಿಂದ ಮತ್ತೊಂದು ಯುನಿಟ್‍ ಅನ್ನು ಬೆಂಗಳೂರು ರಕ್ತನಿಧಿ ಕೇಂದ್ರದಿಂದ ಅಪರೂಪದ ರಕ್ತ ಸಂಗ್ರಹಿಸಿ, ಗರ್ಭಿಣಿಗೆ ನೀಡಲಾಗಿದೆ.

ತಕ್ಷಣ ಶಸ್ತ್ರಚಿಕಿತ್ಸೆ ಅವಶ್ಯಕತೆ ಮತ್ತು ಅದರ ಸಾಧಕ - ಬಾಧಕಗಳ ಬಗ್ಗೆ ತಿಳಿಸಿ, ಶಸ್ತ್ರಚಿಕಿತ್ಸೆಗೆ ಒಪ್ಪಿಸಿ ಅರವಳಿಕೆ ತಜ್ಞ ವೈದ್ಯರಾದ ಡಾ.ಶಿವಾನಂದ ಪಿ.ಟಿ ಮತ್ತು ತಂಡದವರಿಂದ ಸಹಾಯ ಪಡೆದು ಯಶಸ್ವಿ 3 ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿ, ಹೊಟ್ಟೆಯೊಳಗೆ ಸಂಗ್ರಹವಾಗಿದ್ದ ಸುಮಾರು 2.5 ಲೀ.ನಷ್ಟು ರಕ್ತವನ್ನು ಹೊರತೆಗೆದು ಗರ್ಭಿಣಿಯನ್ನು ಮೃತ್ಯುಕೂಪದಿಂದ ರಕ್ಷಿಸಿದ್ದಾರೆ.

ಮಾಯಕೊಂಡದ ಪ್ರವೀಣ್ ಜಿ, ಕೊಟ್ಟೂರಿನ ಸಿದ್ದೇಶ್, ಸಂಕಲ್ಪ ಫೌಂಡೇಶನ್, ಬೆಂಗಳೂರು ರಕ್ತನಿಧಿ ಕೇಂದ್ರ ಹಾಗೂ ಶಿವಮೊಗ್ಗ ಮೆಗ್ಗಾನ್ ರಕ್ತನಿಧಿ ಕೇಂದ್ರ ಅತಿ ವಿರಳ ಗುಂಪಿನ ರಕ್ತವನ್ನು ದಾನ ಮಾಡಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮೆದುಳಿನಲ್ಲಿತ್ತು 8 ಸೆಂ. ಮೀ ಉದ್ದದ ಜೀವಂತ ಹುಳು.. ಪ್ರಪಂಚದಲ್ಲೇ ಮೊದಲ ಪ್ರಕರಣವಿದು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.