ETV Bharat / state

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಕುಂದುಕೊರತೆ ಆಗದಂತೆ ನೋಡಿಕೊಳ್ಳಿ: ಸಚಿವ ಈಶ್ವರಪ್ಪ

ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗುವ ಕೊರೊನಾ ತಪಾಸಣೆಯ ಫಲಿತಾಂಶವನ್ನು ಆದಷ್ಟು ಬೇಗನೆ ಸಂಬಂಧಪಟ್ಟವರಿಗೆ ತಿಳಿಸುವ ವ್ಯವಸ್ಥೆ ಮಾಡಬೇಕೆಂದು ಸಚಿವ ಈಶ್ವರಪ್ಪ ಸೂಚಿಸಿದರು.

author img

By

Published : Aug 25, 2020, 6:12 PM IST

Minister KS Eshwarappa
ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳನ್ನು ದಾಖಲಿಸಿ ಯಾವುದೇ ಕುಂದುಕೊರತೆ ಆಗದಂತೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚನೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕುಂದುಕೊರತೆಯಾಗದಂತೆ ಕೊರೊನಾ ಪೀಡಿತರಿಗೆ ಚಿಕಿತ್ಸೆಗೆ ಕ್ರಮಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

ಜಿಲ್ಲಾಡಳಿತ ಸಭಾಂಗಣದಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಪ್ರಸ್ತುತ ಸುಬ್ಬಯ್ಯ ಮೆಡಿಕಲ್ ಕಾಲೇಜು, ನಾರಾಯಣ ಹೃದಯಾಲಯ, ಮ್ಯಾಕ್ಸ್ ಮತ್ತು ನಂಜಪ್ಪ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 600 ಬೆಡ್‍ಗಳಿವೆ. ಇವುಗಳ ಪೈಕಿ ಶೇ.50ರಷ್ಟು ಬೆಡ್‍ಗಳನ್ನು ಸರ್ಕಾರಿ ಕೋಟಾದಡಿ ಒದಗಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಕೆಲವು ಖಾಸಗಿ ಆಸ್ಪತ್ರೆಗಳ ಕಾರ್ಯವೈಖರಿ ಬಗ್ಗೆ ದೂರುಗಳು ಬರುತ್ತಿವೆ. ಇತ್ತೀಚಿಗೆ ಕೊರೊನಾ ಪೀಡಿತೆ ತುಂಬು ಗರ್ಭಿಣಿಯೊಬ್ಬರನ್ನು ದಾಖಲಿಸಲು ಖಾಸಗಿ ಆಸ್ಪತ್ರೆಯೊಂದು ನಿರಾಕರಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ದೂರುಗಳು ಬರಬಾರದು ಎಂದು ಅವರು ಹೇಳಿದರು.

ತಂಡ ರಚನೆ: ಮೆಗ್ಗಾನ್ ಸೇರಿದಂತೆ ಎಲ್ಲಾ ಕೋವಿಡ್ ಆಸ್ಪತ್ರೆಗಳಿಗೆ ಪ್ರತಿದಿನ ಭೇಟಿ ನೀಡಿ, ರೋಗಿಗಳೊಂದಿಗೆ ಮಾತನಾಡಿ, ಲಭ್ಯವಿರುವ ಬೆಡ್ ಸಂಖ್ಯೆ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಪರಿಶೀಲನೆ ನಡೆಸಲು ಹಿರಿಯ ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗುವುದು. ಈ ತಂಡ ಪ್ರತಿದಿನ ವರದಿಯನ್ನು ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಪ್ರಸ್ತುತ ಮೆಗ್ಗಾನ್‍ನಲ್ಲಿ 160 ಕೊರೊನಾ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇನ್ನೂ 250 ಮಂದಿ ಕೊರೊನಾ ಶಂಕಿತರು ಐಸೋಲೇಷನ್ ವಾರ್ಡ್‍ನಲ್ಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಸಹ ಇಂತಹ ಐಸೋಲೇಷನ್ ವಾರ್ಡ್ ಆರಂಭಿಸಲು ವ್ಯವಸ್ಥೆ ಮಾಡಬೇಕೆಂದು ಸಚಿವರು ಸೂಚಿಸಿದರು.

ಪ್ರಮಾಣ ಇಳಿಮುಖ: ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಮೆಗ್ಗಾನ್ ಆಸ್ಪತ್ರೆಗಿಂತ ಹೆಚ್ಚಾಗಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವವರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಕೊರೊನಾ ಪೀಡಿತರಿಗೆ ಮಾನಸಿಕ ಸ್ಥೈರ್ಯ ತುಂಬಲು ಮನಶಾಸ್ತ್ರಜ್ಞರು ಮತ್ತು ಕೌನ್ಸಿಲರ್​ಗಳನ್ನು ನಿಯೋಜಿಸಬೇಕು. ಅವರು ಪ್ರತಿದಿನ ಕೊರೊನಾ ಪೀಡಿತರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.