ಶಿವಮೊಗ್ಗ: ಸರ್ಕಾರಿ ನೌಕರರ ಪರವಾಗಿ ಎಂದಿಗೂ ಸರ್ಕಾರಿ ನೌಕರರ ಸಂಘ ಇರುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಉರ್ದು ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ಕಾರ್ಯಾಗಾರ ಹಾಗೂ ಶಿಕ್ಷಕರ ಸಮಾವೇಶ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ನೌಕರರೆಲ್ಲಾ ಸೇರಿ ನಮ್ಮನ್ನ ಆಯ್ಕೆ ಮಾಡಿದ್ದೀರಿ, ನಿಮ್ಮ ಸಮಸ್ಯೆ ಗಳನ್ನು ಸರ್ಕಾರಕ್ಕೆ ತಿಳಿಸಿ ಬಗೆಹರಿಸುತ್ತೇವೆ ಎಂದರು.
ಸರ್ಕಾರಿ ನೌಕರರ ಸಮಸ್ಯೆಗಳನ್ನು ಸಂಬಂಧಪಟ್ಟ ಸಚಿವರ ಮುಂದಿಟ್ಟು ಕೆಲಸಮಾಡಿಸಿಕೊಂಡು ಬರುವ ತಾಕತ್ತು ಸರ್ಕಾರಿ ನೌಕರರ ಸಂಘಕ್ಕಿದೆ ಎಂದರು. ನೌಕರರ ಜೊತೆಗೆ ಎಂದಿಗೂ ನಾವಿದ್ದೇವೆ ಎಂದು ಭರವಸೆ ನೀಡಿದರು.