ಶಿವಮೊಗ್ಗ : ಬೈಕ್ ಮೇಲೆ ಕುಳಿತು ಆಟವಾಡುತ್ತಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಹತೂಳಲು ಗ್ರಾಮದಲ್ಲಿ ನಡೆದಿದೆ.
ನಿತಿನ್ (12) ಮೃತಪಟ್ಟ ಬಾಲಕ. ನಿತಿನ್ ರಸ್ತೆ ಬದಿ ನಿಂತಿದ್ದ ಬೈಕ್ ಮೇಲೆ ಕುಳಿತು ಆಟವಾಡುತ್ತಿದ್ದ. ಈ ವೇಳೆ ವಿದ್ಯುತ್ ತಂತಿ ಹರಿದು ಬಿದ್ದ ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಈಗಾಗಲೇ ಮಳೆಗಾಲ ಪ್ರಾರಂಭವಾಗಿದೆ. ವಿದ್ಯುತ್ ತಂತಿ ತುಂಡಾಗಿ ಬೀಳುತ್ತಿರುತ್ತವೆ. ಇದನ್ನು ದುರಸ್ಥಿ ಮಾಡಬೇಕಾದ ಮೆಸ್ಕಾಂ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮೃತ ಬಾಲಕನ ಕುಟುಂಬಕ್ಕೆ ಮೆಸ್ಕಾಂ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.