ಶಿವಮೊಗ್ಗ: ಜಿಲ್ಲೆಯ ಮಲ್ಲಿಗೆನಹಳ್ಳಿಯ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ ಸಮುದಾಯದವರು ಈ ಬಾರಿ ಲೋಕಸಭಾ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಎಂ. ಗುರುಮೂರ್ತಿ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಯಾವುದೇ ರೀತಿಯ ಮೂಲ ಸೌಕರ್ಯ ದೊರೆಯದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕಾರ ಮಾಡುತ್ತಿದ್ದೇವೆ ಎಂದರು.
ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಬೀದಿ ದೀಪಗಳು, ರಸ್ತೆ ಹೀಗೆ ಮೂಲಭೂತ ಸೌಲಭ್ಯಗಳನ್ನು ನೀಡದೆ ಮಹಾನಗರ ಪಾಲಿಕೆ ಈ ಸಮುದಾಯವನ್ನ ನಿರ್ಲಕ್ಷಿಸಿದೆ. ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾರು ಮತದಾನ ಮಾಡದೇ ಚುನಾವಣೆ ಬಹಿಷ್ಕಾರ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.