ETV Bharat / state

ನಿರಂತರ ಜ್ಯೋತಿ ಕಾಮಗಾರಿ ವಿಳಂಬ : ಗ್ರಾಮಸ್ಥರಿಂದ ಇಂಜಿನಿಯರ್​ಗೆ ಮನವಿ

ವಿಳಂಬವಾಗುತ್ತಿರುವ ನಿರಂತರ ಜ್ಯೋತಿ ಯೋಜನೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವಂತೆ ಮೆಸ್ಕಾಂ ಇಂಜಿನಿಯರ್​ಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ

author img

By

Published : Jun 14, 2019, 12:28 PM IST

ಮನವಿ

ಶಿವಮೊಗ್ಗ: ಸರ್ಕಾರದ ಮಹತ್ತರ ಯೋಜನೆ ನಿರಂತರ ಜ್ಯೋತಿಯ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದ ವಿಜಯಕುಮಾರ್ ನೇತೃತ್ವದಲ್ಲಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ಮೆಸ್ಕಾಂ ಇಂಜಿನಿಯರ್​ಗೆ ಮನವಿ ಸಲ್ಲಿಸಿದ ಗ್ರಾಮಸ್ಥರು

ಶಿವಮೊಗ್ಗ ತಾಲೂಕಿನ ಹಸೂಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕಿನಾದ್ಯಂತ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಆರಂಭಗೊಂಡು ಒಂದು ವರ್ಷ ಕಳೆದರೂ ಕೂಡ ಇವರೆಗೂ ಪೂರ್ಣಗೊಂಡಿಲ್ಲ. ಅಲ್ಲದೇ ಕೆಲವು ಕಡೆ ವಿದ್ಯುತ್ ಸರಬರಾಜು ಮಾಡುವ ಟ್ರಾನ್ಸ್​​ಫಾರ್ಮಾರ್​ಗಳನ್ನು ರಸ್ತೆಯಂಚಿನಲ್ಲಿಯೇ ಅಳವಡಿಸಿರುವುದರಿಂದ ಓಡಾಡುವುದೂ ಕಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಮತ್ತು ರಸ್ತೆ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆಗೆದು ದೂರದಲ್ಲಿ ಅಳವಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

Intro:ಶಿವಮೊಗ್ಗ,
ಸರ್ಕಾರದ ಮಹತ್ತರ ಯೋಜನೆ ನಿರಂತರ ಜ್ಯೋತಿಯ ಕಾಮಗಾರಿಗಳು ವಿಳಂಬವಾಗುತ್ತಿದೆ. ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದ ವಿಜಯಕುಮಾರ್ ನೇತೃತ್ವದಲ್ಲಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಯಿತು.

Body:ಸರ್ಕಾರದ ಮಹತ್ತರ ಯೋಜನೆಯಾದ ನಿರಂತರ ಜ್ಯೋತಿಯ ಕಾಮಗಾರಿಗಳು ವಿಳಂಬವಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ತಾಲೂಕಿನ ಹಸೂಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕಿನಾದ್ಯಂತ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಆರಂಭಗೊಂಡು ಒಂದು ವರ್ಷ ಕಳೆದರು ಕೂಡ ಇವರೆಗೂ ಪೂರ್ಣಗೊಂಡಿಲ್ಲ. ಅಲ್ಲದೆ ಕೆಲವು ಕಡೆ ವಿದ್ಯುತ್ ಸರಬರಾಜು ಮಾಡುವ ಟ್ರಾನ್ಸ್ಫಾರ್ಮರ್ ಹಾರಗಳನ್ನು ರಸ್ತೆಯಂಚಿನಲ್ಲಿಯೆ ಅಳವಡಿಸಲಾಗಿದೆ.ಇದರಿಂದ ಅಪಾಯಗಳಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ .
ಹಾಗಾಗಿ ಈ ಯೋಜನೆಯ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಮತ್ತು ರಸ್ತೆ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆಗೆದು ದೂರದಲ್ಲಿ ಅಳವಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.