ETV Bharat / state

ವಿಚಾರಣೆಗೆಂದು ಠಾಣೆಗೆ ಕರೆತಂದ ಆರೋಪಿ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಎಸ್ಕೇಪ್ - ರಿಪ್ಪನಪೇಟೆ ಪೊಲೀಸ್​ ಠಾಣೆಯಿಂದ ಕಳ್ಳತನ ಆರೋಪಿ ಎಸ್ಕೇಪ್​

ವಿಚಾರಣೆಗೆಂದು ಕರೆ ತಂದಿದ್ದ ಕಳ್ಳತನ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

theft-accused-escaped-from-police-station
ವಿಚಾರಣೆಗೆಂದು ಠಾಣೆಗೆ ಕರೆತಂದ ಆರೋಪಿ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಎಸ್ಕೇಪ್​!
author img

By

Published : May 19, 2022, 1:54 PM IST

ಶಿವಮೊಗ್ಗ: ವಿಚಾರಣೆಗೆಂದು ಕರೆ ತಂದಿದ್ದ ಟ್ರ್ಯಾಕ್ಟರ್ ಕಳ್ಳತನದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಹೊಸನಗರ ತಾಲೂಕು ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪ್ರತಾಪ ಸಿಂಗ್ ಎಂಬಾತನೆ ಪೊಲೀಸ್ ಠಾಣೆಯಿಂದ ಎಸ್ಕೇಪ್‌ ಆದ ಆರೋಪಿಯಾಗಿದ್ದಾನೆ.

ಈತನನ್ನು ಟ್ರ್ಯಾಕ್ಟರ್ ಕದ್ದ ಆರೋಪದಡಿ ರಿಪ್ಪನ್​ಪೇಟೆ ಪೊಲೀಸ್ ಠಾಣೆಗೆ ಕರೆ ತಂದು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಶೌಚಾಲಯಕ್ಕೆ ಹೋಗಬೇಕೆಂದು ಹೇಳಿ ಹೋಗಿದ್ದಾನೆ. ಶೌಚಾಲಯವು ಪೊಲೀಸ್ ಠಾಣೆಯ ಮೇಲ್ಭಾಗದಲ್ಲಿದ್ದು, ಅಲ್ಲಿಗೆ ಹೋದಾಗ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

ಆರೋಪಿಯನ್ನು ನೋಡಿಕೊಳ್ಳುತ್ತಿದ್ದ ಕಾನ್ಸ್​ಟೇಬಲ್​ ರಮೇಶ್​ ಮೊಬೈಲ್​ನಲ್ಲಿ ಮಾತನಾಡುತ್ತಿರುವಾಗ ಮೆಟ್ಟಿಲು‌ ಇಳಿದು ಪೊಲೀಸ್ ಠಾಣೆಯ ಮುಖ್ಯ ಗೇಟ್​ನಿಂದಲೇ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರತಾಪ ಅಕ್ರಮ ಮರಳು ಸಾಗಣೆ ಸೇರಿದಂತೆ ಹಲವು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದನು.

ನಂತರ ಪೊಲೀಸರು ಹುಡುಕಾಟ ನಡೆಸಿದರೂ ಇದುವರೆಗೆ ಆರೋಪಿ ಪತ್ತೆಯಾಗಿರಲಿಲ್ಲ. ವಿಚಾರಣೆಗೆ ಕರೆತಂದಾಗ ಕಾಣೆಯಾಗಿದ್ದಕ್ಕೆ ಎಸ್​​ಪಿ ರಿಪ್ಪನ್​ಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಗರಂ ಆಗಿದ್ದಾರೆ ಎನ್ನಲಾಗ್ತಿದೆ. ಆರೋಪಿ ಪತ್ತೆಯಾಗದಿದ್ದರೆ ಠಾಣೆಯ ಸಿಬ್ಬಂದಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ಲಾರಿ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿ ಸಾವು: ಚಾಲಕನ ವಿರುದ್ಧ ನಿರ್ಲಕ್ಷ್ಯ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.