ಶಿವಮೊಗ್ಗ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಅಕ್ಷರ ದಾಸೋಹ ನೌಕರರಿಗೆ ಅಶ್ವಾಸನೆ ನೀಡಿ ಮೋಸ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ನಗರದ ಮಹಾವೀರ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಫೆ.13 ರಂದು ಪ್ರತಿಭಟನೆ ವೇಳೆ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ವೇತನ ಹೆಚ್ಚಳ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾವನೆ ಮಾಡದೆ ಅಕ್ಷರ ದಾಸೋಹ ನೌಕರರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಕೂಡಲೇ ರಾಜ್ಯ ಸರ್ಕಾರ ಕೊಟ್ಟ ಆಶ್ವಾಸನೆ ಪ್ರಕಾರ ವೇತನ ಹೆಚ್ಚಳ ಮಾಡಬೇಕು ಹಾಗೂ ನೌಕರರನ್ನು ಖಾಯಂಗೊಳಿಸಬೇಕು ಮತ್ತು ಈ ಹಿಂದೆ ಮಾತು ಕೊಟ್ಟಂತೆ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ.