ETV Bharat / state

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಚಿಂತನೆ; ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್​ನಲ್ಲಿ ಅನುದಾನ ಕಾಯ್ದಿರಿಸಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್​ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ
author img

By

Published : Dec 26, 2020, 5:54 PM IST

ಶಿವಮೊಗ್ಗ: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿದ ಸ್ಮಾರ್ಟ್ ಕ್ಲಾಸ್​ಗಳನ್ನು ಆರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್

ಇಂದು ಶಿವಮೊಗ್ಗ ನಗರದ ಪಾರ್ಕ್ ಬಡಾವಣೆಯ ಸರ್ಕಾರಿ ಆಂಗ್ಲ ಮತ್ತು ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಸ್ಮಾರ್ಟ್ ತರಗತಿಗಳನ್ನು ವೀಕ್ಷಿಸಿ ಮಾತನಾಡಿದ ಅವರು, ಕಳೆದ ವರ್ಷದ ಮಳೆಗಾಲದ ಅವಧಿಯಲ್ಲಿ ಹಾನಿಗೊಳಗಾಗಿದ್ದ ನಗರದ 87 ಶಾಲೆಗಳನ್ನು ದುರಸ್ತಿಗೆ ಒಳಪಡಿಸಲಾಗಿದೆ. ಈಗಾಗಲೇ 70 ಶಾಲೆಗಳ ದುರಸ್ತಿ ಕಾರ್ಯ ಪೂರ್ಣಗೊಂಡಿದೆ ಎಂದರು.

ಶಾಲೆಗಳಲ್ಲಿ 6.5 ಕೋಟಿ ರೂ.ಗಳ ವೆಚ್ಚದಲ್ಲಿ 45 ಶಾಲೆಗಳಿಗೆ 460 ಕಂಪ್ಯೂಟರ್, ಓವರ್​​ ಹೆಡ್​ ಪ್ರೊಜೆಕ್ಟರ್, ಲ್ಯಾಪ್​ಟಾಪ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒಳಗೊಂಡ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಂದಿನ ಬಜೆಟ್​ನಲ್ಲಿ ಅನುದಾನವನ್ನು ಕಾಯ್ದಿರಿಸಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್​ಗಳನ್ನು ಆರಂಭಿಸಿ ಉತ್ತಮ ವಾತಾವರಣ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ರಾಜ್ಯ ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಈಗಾಗಲೇ ನಗರದ 87 ಶಾಲೆಗಳ ದುರಸ್ತಿಗೆ ಕೋಟಿ ರೂ.ಗಳನ್ನು ಖರ್ಚು ಮಾಡಿ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಮಾದರಿ ಶಾಲೆಗಳನ್ನು ನಿರ್ಮಿಸಲಾಗಿದೆ. ಈ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಯಾವುದೇ ವಿದ್ಯಾರ್ಥಿಗಳು ಕೀಳರಿಮೆ ಇಲ್ಲದೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ನಗರದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯದಲ್ಲಿ ಸ್ಥಳೀಯ ಖಾಸಗಿ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಹಾಯ ಹಸ್ತ ನೀಡಿದ್ದಾರೆ ಎಂದರು.

ಆಚಾರ್ಯತ್ರಯರ ಭವನ

ನಗರಕ್ಕೆ ಆಗಮಿಸುವ ಸಾಧು -ಸಂತರು ತಂಗಲು, ಉಪನ್ಯಾಸಗಳನ್ನು ಏರ್ಪಡಿಸಲು ಹಾಗೂ ಅವರ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅನುಕೂಲವಾಗುವಂತೆ ಆಚಾರ್ಯತ್ರಯರ ಭವನವನ್ನು ರೂಪಿಸಲಾಗಿದೆ ಎಂದರು. ಈ ಭವನಕ್ಕೆ ಅಗತ್ಯವಾಗಿರುವ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಿ, ಕಟ್ಟಡ ಲೋಕಾರ್ಪಣೆ ಮಾಡಲಾಗುವುದು. ಈ ಕಟ್ಟಡದಲ್ಲಿ ಆಚಾರ್ಯತ್ರಯರ ವಿಗ್ರಹಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಕಟ್ಟಡವನ್ನು 1.45 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಕಟ್ಟಡದ ವ್ಯವಸ್ಥಿತ ನಿರ್ವಹಣೆಗೆ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆಯ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳಿಧರ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.