ETV Bharat / state

ಶಿವಮೊಗ್ಗದಲ್ಲಿ ಭಾಗಶಃ ನಿರ್ಬಂಧಕ್ಕೆ ಚಿಂತನೆ: ಡಿಸಿ ಹೇಳಿಕೆ

author img

By

Published : Mar 23, 2020, 9:09 PM IST

ಕೊರೊನಾ ನಿಯಂತ್ರಣ ಹಿನ್ನೆಲೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹಾಲು, ತರಕಾರಿ, ಔಷಧ, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

DC. K.B. Shivakumar press meet
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಇತರ ಎಲ್ಲಾ ಸೇವೆಗಳನ್ನು ಭಾಗಶಃ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹಾಲು, ತರಕಾರಿ, ಔಷಧ, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಮಾತ್ರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗುವುದು. ಇನ್ನಿತರ ಉತ್ಪಾದನಾ ವಸ್ತುಗಳ ಮಳಿಗೆಗಳನ್ನು ಮಾ. 31ರವರೆಗೆ ಮುಚ್ಚಲು ಸೂಚಿಸಲಾಗುವುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಬಸ್ ಸೇವೆ ನಿರ್ಬಂಧಿಸಲಾಗುವುದು. ಸಾರ್ವಜನಿಕರು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರ ಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

DC. K.B. Shivakumar press meet
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸುದ್ದಿಗೋಷ್ಠಿ

ಕಾರ್ಯಪಡೆ ರಚನೆ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಜಿಲ್ಲೆಯಲ್ಲಿ ಎರಡು ಕಾರ್ಯಪಡೆಗಳನ್ನು ರಚಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳು, ಚಿಕಿತ್ಸೆ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಕಾರ್ಯಪಡೆ ರಚಿಸಲಾಗಿದೆ. ಇದೇ ರೀತಿ ಜಿಲ್ಲಾಡಳಿತಕ್ಕೆ ವೈದ್ಯಕೀಯ ಸಲಹೆಗಳು ಮತ್ತು ನೆರವು ಒದಗಿಸಲು ಖಾಸಗಿ ಆಸ್ಪತ್ರೆಗಳ ಹಿರಿಯ ವೈದ್ಯರನ್ನು ಒಳಗೊಂಡ ಮೆಡಿಕಲ್ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆ ಪ್ರತಿ ದಿನ ಬೆಳಗ್ಗೆ 10 ಗಂಟೆಗೆ ಸಭೆ ಸೇರಿ ಕಾರ್ಯ ಯೋಜನೆ ರೂಪಿಸಲಿದೆ ಎಂದರು.

ಖಾಸಗಿ ಆಸ್ಪತ್ರೆ ಸೌಲಭ್ಯ ಬಳಕೆ: ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ ಸೇರಿದಂತೆ ಎಲ್ಲ ವೈದ್ಯಕೀಯ ಸೇವೆಗಳ ವಿವರಗಳನ್ನು ಪಡೆಯಲಾಗಿದ್ದು, ಅಗತ್ಯ ಬಿದ್ದರೆ ಈ ಸೌಲಭ್ಯಗಳನ್ನು ಬಳಸಿಕೊಳ್ಳುವ ಕುರಿತು ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೀಟ ನಾಶಕ ಸಿಂಪಡಿಸುವಿಕೆ: ನಗರ ವ್ಯಾಪ್ತಿಯಲ್ಲಿ ಕೀಟನಾಶಕ ಸಿಂಪಡಿಸುವಿಕೆ ಕಾರ್ಯವನ್ನು ನಿರಂತರವಾಗಿ ಮಾಡಬೇಕು. ನಿತ್ಯ ಬಸ್ ನಿಲ್ದಾಣ ಹಾಗೂ ಬಸ್‍ಗಳಿಗೆ ಕೀಟನಾಶಕ ಸಿಂಪಡಿಸುವಂತೆ ಸೂಚನೆ ನೀಡಲಾಗಿದೆ. ಹೂ, ಹಣ್ಣು ಸೇರಿದಂತೆ ಎಲ್ಲ ಮಾರುಕಟ್ಟೆಗಳಿಗೆ ನಿಗದಿಪಡಿಸಲಾದ ವ್ಯವಹಾರ ಅವಧಿ ಮುಗಿದ ಬಳಿಕ ಸಂಪೂರ್ಣವಾಗಿ ಕೀಟನಾಶಕ ಸಿಂಪಡಿಸುವ ಕಾರ್ಯ ಕೈಗೊಳ್ಳಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ದೊಡ್ಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಲಾಡ್ಜ್​ಗಳಿಗೆ ಸೂಚನೆ: ತಮ್ಮಲ್ಲಿಗೆ ಬರುವ ಪ್ರತಿಯೊಬ್ಬರ ಪ್ರಯಾಣ ಇತಿಹಾಸ ಸೇರಿದಂತೆ ಸಮಗ್ರ ವಿವರಗಳನ್ನು ಪಡೆದ ಬಳಿಕ ಮಾತ್ರ ಕೋಣೆ ಒದಗಿಸುವಂತೆ ಎಲ್ಲ ಲಾಡ್ಜ್ ಮಾಲೀಕರಿಗೆ ಸೂಚನೆ ನೀಡಲಾಗಿದೆ. ವಿದೇಶಗಳಿಂದ ಅಥವಾ ಕೊರೊನಾ ಪೀಡಿತ ಜಿಲ್ಲೆಗಳಿಂದ ಆಗಮಿಸುವವರ ವಿವರಗಳನ್ನು ಸ್ಥಳೀಯ ಆಡಳಿತಕ್ಕೆ ತಕ್ಷಣ ನೀಡಲು ತಿಳಿಸಲಾಗಿದೆ. ಪ್ರತಿಯೊಬ್ಬರು ನೀಡಿರುವ ಮಾಹಿತಿಯನ್ನು ಪರಿಶೀಲಿಸಲಾಗುವುದು ಎಂದರು.

ಹಬ್ಬವನ್ನು ಸರಳವಾಗಿ ಆಚರಿಸಿ: ಯುಗಾದಿ ಹಬ್ಬವನ್ನು ಪ್ರತಿಯೊಬ್ಬರೂ ಸರಳವಾಗಿ ಆಚರಿಸುವ ಮೂಲಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಬೇಕು. ಎಲ್ಲಾ ಪ್ರಮುಖ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೊರೊನಾ ತಡೆಗಟ್ಟಲು ಎಲ್ಲರೂ ಸಹಕರಿಸುವ ಭರವಸೆ ನೀಡಿದ್ದಾರೆ. ಇನ್ನು ನಗರದ ವ್ಯಾಪ್ತಿಯಲ್ಲಿರುವ ಎಲ್ಲಾ ಭಿಕ್ಷುಕರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಚೆಕ್‍ ಪೋಸ್ಟ್: ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಆಗಮಿಸುವ ವಾಹನಗಳನ್ನು ಹಾಗೂ ದಾವಣಗೆರೆಯಲ್ಲಿ ಹಕ್ಕಿಜ್ವರ ಪ್ರಕರಣ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲು ಗಡಿಭಾಗದಲ್ಲಿ ಚೆಕ್‍ ಪೋಸ್ಟ್ ತೆರೆಯಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.