ಶಿವಮೊಗ್ಗ: ಎರಡು ಗ್ರಾಮ ಪಂಚಾಯತ್ಗಳನ್ನು ಪಟ್ಟಣ ಪಂಚಾಯಿತಿಯನ್ನಾಗಿ ಹಾಗೂ ಒಂದು ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.
ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಅದೇ ರೀತಿ ಭದ್ರಾವತಿ ತಾಲೂಕು ಹೊಳೆಹೊನ್ನೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಸಹ ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ.
ಜನಸಂಖ್ಯೆ ಆಧಾರದ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರ ತೆಗದುಕೊಂಡಿದೆ. ಇದರಿಂದ ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳ ಅಭಿವೃದ್ಧಿಗೆ ಪ್ರತ್ಯೇಕವಾಗಿಯೇ ಅನುದಾನವನ್ನು ಸರ್ಕಾರ ನೀಡಲಿದೆ. ಇದರಿಂದ ಹೆಚ್ಚಿನ ಅಭಿವೃದ್ಧಿ ನಡೆಸಲು ಸಾಧ್ಯವಾಗುತ್ತದೆ. ಅದೇ ರೀತಿ ತೆರಿಗೆಯು ಸಹ ಹೆಚ್ಚಳವಾಗಲಿದೆ.