ಶಿವಮೊಗ್ಗ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಸೊರಬ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೊರಬ ತಾಲೂಕಿನ ಮಂಗಾಪುರ ಗ್ರಾಮದ ಎಸ್. ಪ್ರಶಾಂತ್ ಶಿವಾಜಿ (27), ಮೈಸೂರಿನ ಗಣೇಶ ನರಸಿಂಹ (22) ಹಾಗೂ ಹಾನಗಲ್ ತಾಲೂಕು ಅಕ್ಕಿ ಆಲೂರು ಗ್ರಾಮದ ಪ್ರಶಾಂತ ಬಸಪ್ಪ (20) ಬಂಧಿತರು. ಇವರಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಸೊರಬ ತಾಲೂಕಿನ ಛತ್ರದಹಳ್ಳಿಯ ಲಲಿತಮ್ಮ ಎಂಬುವರ ಮನೆಗೆ ನುಗ್ಗಿದ ಮೂವರು, ಲಲಿತಮ್ಮನವರ ಮೈ ಮೇಲಿದ್ದ ಬಂಗಾರದ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸುತ್ತಿರುವಾಗ ತಾಲೂಕಿನ ಸಂಪಗೋಡು ಸಮೀಪ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ವಿಚಾರಣೆಗೆ ಒಳಪಡಿಸಿದಾಗ ದರೋಡೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪ್ರಕರಣದಲ್ಲಿ ಇನ್ನೂ ನಾಲ್ವರು ಭಾಗಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸಿಪಿಐ ಆರ್.ಡಿ. ಮರುಳುಸಿದ್ದಪ್ಪ, ಪಿಎಸ್‌ಐ ಟಿ.ಬಿ. ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ನಡೆಸಿ ವಿಶೇಷ ಕಾರ್ಯಾಚರಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಪರಮೇಶನಾಯ್ಕ್ ಮತ್ತು ಕಾನ್ಸ್‌ಟೇಬಲ್‌ಗಳಾದ ಸಲ್ಮಾನ್‌ಖಾನ್, ಸಂದೀಪ, ಸಂದೀಪ ಕುಮಾರ್, ಸಿದ್ದನಗೌಡ, ಹನುಮಂತ, ಮಂಜುನಾಥ್ ಪಾಲ್ಗೊಂಡಿದ್ದರು.