ETV Bharat / state

Toll Charges: ಬೆಂಗಳೂರು - ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ: ಸಂಚಾರ ಮತ್ತಷ್ಟು ದುಬಾರಿ - ಬೆಂಗಳೂರು ಮತ್ತು ಮೈಸೂರು ಹೆದ್ದಾರಿ

ಬೆಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಟೋಲ್​ ದರ ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ಹೀಗಿದೆ..

toll-increased-in-bangalore-mysore-highway-outrage-of-motorists
ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ : ವಾಹನ ಸವಾರರ ಆಕ್ರೋಶ
author img

By

Published : Jun 12, 2023, 10:27 PM IST

Updated : Jun 12, 2023, 10:58 PM IST

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸುಂಕ ಹೆಚ್ಚಳ : ವಾಹನ ಸವಾರರ ಆಕ್ರೋಶ

ರಾಮನಗರ : ಬೆಂಗಳೂರು ಮತ್ತು ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಟೋಲ್ ದರ ಹೆಚ್ಚಳ ಮಾಡಲಾಗಿದೆ. ಸದ್ದಿಲ್ಲದೆ ಏರಿಕೆ ಆಗಿರುವ ಟೋಲ್ ದರದ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಪ್ರಾಧಿಕಾರ ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿದ್ದು, ಜೂನ್ 1ರಿಂದ ಪರಿಷ್ಕೃತ ಮೊತ್ತದ ಟೋಲ್ ವಸೂಲಿ ಮಾಡಲಾಗುತ್ತಿದೆ. ಬಹುತೇಕ ವಾಹನಗಳಲ್ಲಿ ಫಾಸ್ಟ್ ಟ್ಯಾಗ್ ಇರುವ ಕಾರಣ ಹೆಚ್ಚಿನ ಮೊತ್ತ ಕಡಿತವಾಗಿರುವುದು ವಾಹನ ಸವಾರರ ಗಮನಕ್ಕೆ ಬಂದಿಲ್ಲ ಎಂದು ಹೇಳಲಾಗಿದೆ.

2008ರ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳ ಪ್ರಕಾರ, ಪ್ರತಿ ವರ್ಷವೂ ಟೋಲ್‌ ದರವನ್ನು ಪರಿಷ್ಕರಿಸಲಾಗುತ್ತದೆ. ಕಳೆದ ಏ.1ರಂದು ಹೆದ್ದಾರಿ ಪ್ರಾಧಿಕಾರ ಟೋಲ್ ದರ ಏರಿಕೆ ಮಾಡಿತ್ತು. ಆದರೆ ಇದಕ್ಕೆ ವಾಹನ ಸವಾರರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ದರ ಹೆಚ್ಚಳ ಆದೇಶವನ್ನು ಹಿಂಪಡೆಯಲಾಗಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಲಾಗಿದೆ.

ಬೆಂ-ಮೈ ಹೆದ್ದಾರಿ ಹೆಚ್ಚಳವಾದ ಟೋಲ್ ದರ ಹೀಗಿದೆ : ಕಾರು, ವ್ಯಾನ್‌, ಜೀಪ್‌ಗಳ ಏಕಮುಖ ಸಂಚಾರಕ್ಕೆ 135 ರಿಂದ 165 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ ಸುಮಾರು 30 ರೂ. ಹೆಚ್ಚಳ ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಟೋಲ್‌ 220ರಿಂದ 270 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ ಸುಮಾರು 50 ರೂ. ಹೆಚ್ಚಳ ಮಾಡಲಾಗಿದೆ. ಟ್ರಕ್‌, ಬಸ್, 2 ಆಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ 460ರಿಂದ 565 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ ಬರೋಬ್ಬರಿ 105 ರೂ ಹೆಚ್ಚಳ ಮಾಡಲಾಗಿದೆ.

3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರಕ್ಕೆ 500ರಿಂದ 615 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ ಸುಮಾರು 115 ರೂ. ಹೆಚ್ಚಳ ಮಾಡಲಾಗಿದೆ. ಘನ ವಾಹನಗಳ ಏಕಮುಖ ಸಂಚಾರಕ್ಕೆ 720ರಿಂದ 885 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ 165 ರೂ. ಹೆಚ್ಚಳ ಮಾಡಲಾಗಿದೆ. 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್‌ ವಾಹನಗಳ ಏಕಮುಖ ಸಂಚಾರಕ್ಕೆ 880ರಿಂದ 1,080 ರೂ.ಗೆ ಏರಿಕೆ ಮಾಡಲಾಗಿದೆ. ಅಂದರೆ ರೂ.200 ಹೆಚ್ಚಳ ಮಾಡಲಾಗಿದೆ.

ಟೋಲ್​ ಹೆಚ್ಚಿದಂತೆ ಮನವಿ ಮಾಡಿದ್ದ ಪ್ರತಾಪ್​ ಸಿಂಹ: ಏಪ್ರಿಲ್ 1ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗುವುದರಿಂದ ದೇಶದ ಎಲ್ಲಾ ಟೋಲ್ ರಸ್ತೆಗಳ ದರ ಹೆಚ್ಚಳ ಮಾಡಲಾಗುತ್ತದೆ. ಅದರಂತೆ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್ ಹೈವೇ ದರ ಹೆಚ್ಚು ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಈ ಎಕ್ಸ್​ಪ್ರೆಸ್ ಹೈವೇಗೆ ಟೋಲ್ ಆರಂಭವಾಗಿ ಎಪ್ರಿಲ್​ 1 ಕ್ಕೆ ಹದಿನೈದು ದಿನ ಮಾತ್ರ ಆಗಿತ್ತು. ಅಲ್ಲದೆ ಕಾಮಗಾರಿಯೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಟೋಲ್ ಹೆಚ್ಚಳ ಮಾಡುವುದು ಬೇಡ, ತಾತ್ಕಾಲಿಕವಾಗಿ ತಡೆಯಿರಿ ಎಂದು ಹೈವೇ ನಿರ್ವಹಣಾ ಅಧಿಕಾರಿಗಳಲ್ಲಿ ಸಂಸದ ಪ್ರತಾಪ್​ ಸಿಂಹ ಮನವಿ ಮಾಡಿದ್ದರು.

ಇದನ್ನೂ ಓದಿ : ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ವಿರೋಧಿಸಿ ಹೆಚ್.ವಿಶ್ವನಾಥ್ ಪ್ರತಿಭಟನೆ

Last Updated : Jun 12, 2023, 10:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.