ETV Bharat / state

ಶಿವಮೊಗ್ಗ: ಮೂರು ಪೊಲೀಸ್​ ಠಾಣಾ ವ್ಯಾಪ್ತಿಗಳಲ್ಲಿ ನಾಳೆ ನಾಲ್ಕು ಗಂಟೆ ನಿಷೇಧಾಜ್ಞೆ ಸಡಿಲಿಕೆ - ಶಿವಮೊಗ್ಗದಲ್ಲಿ ಕರ್ಪ್ಯೂ ಸಡಿಲಿಕೆ

ಸಾರ್ವಜನಿಕರ ಮನವಿ ಮೇರೆಗೆ ಶಿವಮೊಗ್ಗದ ಮೂರು ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ನಾಳೆ ನಿಷೇಧಾಜ್ಞೆ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

Tomorrow curfew relaxation in Shimoga
ನಿಷೇಧಾಜ್ಞೆ ಹಿನ್ನೆಲೆ ಸ್ಥಬ್ಧವಾಗಿರುವ ಶಿವಮೊಗ್ಗ
author img

By

Published : Dec 8, 2020, 9:31 PM IST

Updated : Dec 8, 2020, 10:49 PM IST

ಶಿವಮೊಗ್ಗ: ನಗರದಲ್ಲಿ ನಿಷೇಧಾಜ್ಞೆ ಮುಂದುವರೆದಿದ್ದು, ನಾಳೆ ಮೂರು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ನಿಷೇಧಾಜ್ಞೆ ಸಡಿಲಿಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 3ರಂದು ಬೆಳಗ್ಗೆ ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬಳಿಕ ನಗರದಲ್ಲಿ ಡಿಸೆಂಬರ್ 9ರ ಬೆಳಗ್ಗೆ 10ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಶಿವಮೊಗ್ಗ ತಹಶೀಲ್ದಾರ್​ ಆದೇಶ ಹೊರಡಿಸಿದ್ದರು. ಹಾಗಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಠಾಣಾ ವ್ಯಾಪ್ತಿಗಳಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನಿಷೇಧಾಜ್ಞೆ ಹಿನ್ನೆಲೆ ಸ್ತಬ್ಧವಾಗಿರುವ ಶಿವಮೊಗ್ಗ ನಗರ

ಇದನ್ನೂ ಓದಿ : ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್

ನಿಷೇಧಾಜ್ಞೆ ಹಿನ್ನೆಲೆ ಮೂರು ಠಾಣಾ ವ್ಯಾಪ್ತಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಪರದಾಡುವಂತಾಗಿದೆ. ಹಾಗಾಗಿ ಕರ್ಫ್ಯೂ ಸಡಿಲಿಸುವಂತೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದರು. ಆದ್ದರಿಂದ ನಗರದ ಮೂರು ಠಾಣೆಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ನಾಲ್ಕು ಗಂಟೆಗಳ ಕಾಲ ನಿಷೇಧಾಜ್ಞೆ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.

Last Updated : Dec 8, 2020, 10:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.