ETV Bharat / state

ಕಾರ್ಯಕರ್ತರ ಋಣವನ್ನು ಅಭಿವೃದ್ಧಿ ಮಾಡುವ ಮೂಲಕ ತೀರಿಸಿ: ಸಚಿವ ಕೆ.ಎಸ್. ಈಶ್ವರಪ್ಪ

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾಗೂ ಪಿಡಿಒಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನುಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಕೆಎಸ್​ ಈಶ್ವರಪ್ಪ ಸಲಹೆ ಸೂಚನೆ ನೀಡಿದ್ದಾರೆ.

 training program to Gram Panchayat President for Vice President and PDO

author img

By

Published : Jul 11, 2021, 12:44 AM IST

ಶಿವಮೊಗ್ಗ: ಗೆಲುವು ನೀಡಿದ ಕಾರ್ಯಕರ್ತರ ಋಣವನ್ನು ಹಳ್ಳಿಗಳ ಅಭಿವೃದ್ಧಿ ಮಾಡುವ ಮೂಲಕ ತೀರಿಸಿ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಸಚಿವ ಕೆ.ಎಸ್ ಈಶ್ವರಪ್ಪ ಸಲಹೆ ನೀಡಿದರು.

ಪ್ರೇರಣ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾಗೂ ಪಿಡಿಒಗಳಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆಯಾ ಗ್ರಾಮ ಪಂಚಾಯತ್​ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕುರಿತು ಚರ್ಚಿಸಿ ಅಂತಿಮಗೊಳಿಸಬೇಕು.ಗ್ರಾಮವನ್ನು ಕುಟುಂಬ ಎಂದು ಪರಿಗಣಿಸಿ ಅಭಿವೃದ್ಧಿಕಾರ್ಯಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರಿಗೆ ಹಾಗೂ ಪಿಡಿಒಗಳಿಗೆ ತರಬೇತಿ ಕಾರ್ಯಗಾರ

ಗ್ರಾಮದಲ್ಲಿ ಕೆಲಸ ಕೇಳಿಕೊಂಡು ಬರುವ ಪ್ರತಿಯೊಬ್ಬರಿಗೂ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಉದ್ಯೋಗ ಕಲ್ಪಿಸಿಕೊಡಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೆರೆ ಕಟ್ಟೆಗಳ ಅಭಿವೃದ್ಧಿ ಜವಾಬ್ದಾರಿಯನ್ನು ಇದೀಗ ಗ್ರಾಮಪಂಚಾಯಿತಿಗಳಿಗೆ ನೇರವಾಗಿ ವಹಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್​ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಗುರುತಿಸಿ ಅವುಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು ಎಂದು ಸೂಚಿಸಿದರು.

ಕ್ರೀಯಾ ಯೋಜನೆ ರೂಪಿಸುವ ಅಧಿಕಾರ ಗ್ರಾಮ ಪಂಚಾಯತಿಗಿದ್ದು, ತಮ್ಮ ಊರಿಗೆ ಬೇಕಾದ ಅಭಿವೃದ್ಧಿ ಕಾರ್ಯಕ್ರಮಗಳು ತಾವೇ ರೂಪಿಸಿಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರು, ಹಾಗೂ ಉಪಾಧ್ಯಕ್ಷರಿಗೆ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.