ಶಿವಮೊಗ್ಗ : 6ನೇ ವೇತನ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಹಾಗೂ ಕುಟುಂಬಸ್ಥರು ತಟ್ಟೆ, ಲೋಟ ಬಾರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ನಮ್ಮ ಬೇಡಿಕೆ ಈಡೇರುವವರೆಗೂ ಯಾವುದೇ ಕಾರಣಕ್ಕೂ ನಾವು ಯಾರೂ ಕೆಲಸಕ್ಕೆ ಹಾಜರಾಗಲ್ಲ. ಸರ್ಕಾರ ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜೈಲ್ ಚಲೋ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ತಟ್ಟೆ,ಬಾಯಿ ಬಡಿದುಕೊಂಡು ಪ್ರತಿಭಟನೆ : ಸಾಗರದಲ್ಲಿ ಕೆಎಸ್ಆರ್ಟಿಸಿ ನೌಕರರ ಕುಟುಂಬದವರು ತಟ್ಟೆ ಬಡಿದು, ಬಾಯಿ ಬಡಿದುಕೊಂಡು ಪ್ರತಿಭಟಿಸಿದ್ದಾರೆ. ಉಪವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರ 6ನೇ ವೇತನ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಸಾರಿಗೆ ನೌಕರರು ಮತ್ತು ಕುಟುಂಬದವರ ಪ್ರತಿಭಟನೆಗೆ ರಾಜ್ಯ ರೈತ ಸಂಘ ಕೂಡ ಬೆಂಬಲ ಸೂಚಿಸಿದೆ.