ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಉತ್ತಮ ಮಳೆಯಿಂದ ಜಿಲ್ಲೆಯ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗಾಜನೂರು ಡ್ಯಾಂ ಭರ್ತಿಯಾಗಿದೆ. ಹೆಚ್ಚುವರಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.
ರಾಜ್ಯದ ಅತಿ ಚಿಕ್ಕ ಹಾಗೂ ಮೊದಲು ಭರ್ತಿಯಾಗುವ ಅಣೆಕಟ್ಟು ಎಂದೇ ಶಿವಮೊಗ್ಗದ ತುಂಗಾ ಡ್ಯಾಂ ಪ್ರಖ್ಯಾತಿ ಪಡೆದಿದೆ. ಇದೀಗ, ಗಾಜನೂರು ಗ್ರಾಮದಲ್ಲಿನ ತುಂಗಾ ಅಣೆಕಟ್ಟು ಭರ್ತಿಯಾಗಿ ನದಿಗೆ 7,545 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಎರಡು ಕ್ರಸ್ಟ್ ಗೇಟ್ಗಳ ಮೂಲಕ ಎರಡು ಸಾವಿರ ಕ್ಯೂಸೆಕ್ ನೀರು ಹಾಗೂ ಅದೇ ರೀತಿ ವಿದ್ಯುತ್ ಉತ್ಪಾದನೆಗೂ ಸಹ ನೀರು ಬಿಡಲಾಗುತ್ತಿದೆ.
ಇದನ್ನೂ ಓದಿ : ಮಲೆನಾಡಲ್ಲಿ ಮಳೆಯಬ್ಬರ : ಗಾಜನೂರು ಡ್ಯಾಂನಿಂದ ತುಂಗೆಗೆ 41 ಸಾವಿರ ಕ್ಯೂಸೆಕ್ ನೀರು
ಅಣೆಕಟ್ಟಿನ ಹಿನ್ನೀರಿನ ಪ್ರದೇಶಗಳಾದ ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಲಾಶಯದ ಒಳ ಹರಿವು ಕೂಡಾ ಹೆಚ್ಚಾಗಿದೆ. ಇದರ ಪರಿಣಾಮ ನಿನ್ನೆ ರಾತ್ರಿ 10 ಸಾವಿರ ಕ್ಯೂಸೆಕ್ ಒಳ ಹರಿವು ಬಂದಿದ್ದು, ಐದಕ್ಕೂ ಅಧಿಕ ಗೇಟ್ಗಳ ಮೂಲಕ ನದಿಗೆ ನೀರು ಬಿಡಲಾಗಿತ್ತು. ಇದೀಗ, ಒಳ ಹರಿವಿನ ಪ್ರಮಾಣ ಸ್ವಲ್ಪ ಕಡಿಮೆಯಾಗಿರುವ ಕಾರಣ ಇಂದು ಎರಡು ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ಇದನ್ನೂ ಓದಿ : ಮಹಾಮಳೆಗೆ ಕರಾವಳಿ ಜನ ಕಂಗಾಲು - ವೃದ್ಧೆ ಸಾವು : ಪೋಸ್ಟ್ ಚೆಂಡಿಯಾದಲ್ಲಿ ಗುಡ್ಡ ಕುಸಿತದ ಆತಂಕ..
3 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 1.50 ಟಿಎಂಸಿ ಡೆಡ್ ಸ್ಟೋರೇಜ್ ಇದೆ. ಅಣೆಕಟ್ಟೆಗೆ 21 ಕ್ರಸ್ಟ್ ಗೇಟುಗಳನ್ನು ಅಳವಡಿಸಲಾಗಿದೆ. 588.24 ಅಡಿ ಎತ್ತರದ ಜಲಾಶಯದಲ್ಲಿ ಕಳೆದ ಒಂದು ವಾರದಿಂದ ಸುರಿದ ಉತ್ತಮ ಮಳೆಯಿಂದ 588.24 ಅಡಿಯಷ್ಟು ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರ ಹರಿವನ್ನು ಕೂಡ ಹೆಚ್ಚಳ ಮಾಡಲಾಗುವುದು ಎಂದು ನದಿಪಾತ್ರದ ಜನರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ : ಕೇರಳದಲ್ಲಿ ಮಳೆ ಆರ್ಭಟ: ಒಬ್ಬ ಸಾವು, ಉಕ್ಕಿಹರಿದ ನದಿಗಳು :ಇಡುಕ್ಕಿ ಜಿಲ್ಲೆಯಲ್ಲಿ ರೆಡ್ ಅಲರ್ಟ್
ಇನ್ನು ತುಂಗಾ ಜಲಾಶಯ ರಾಜ್ಯದಲ್ಲಿಯೇ ತುಂಬುವ ಮೊದಲ ಅಣೆಕಟ್ಟು ಎಂಬ ಖ್ಯಾತಿ ಹೊಂದಿದೆ. ಈ ಅಣೆಕಟ್ಟಿಯ ಎಡ ಮತ್ತು ಬಲ ಕಾಲುವೆಯ ಮೂಲಕ ಶಿವಮೊಗ್ಗ ತಾಲೂಕು ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿಗೂ ನೀರು ಹರಿಸಲಾಗುತ್ತದೆ. ತುಂಗಾ ಮೇಲ್ದಂಡೆ ಯೋಜನೆಯ ಮೂಲಕ ಶಿವಮೊಗ್ಗ, ಹೊನ್ನಾಳಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿಗಳಿಗೆ ನೀರು ಹರಿಸಲಾಗುತ್ತದೆ.
ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ವರುಣನ ಆರ್ಭಟಕ್ಕೆ ನೆಲಕಚ್ಚಿದ ಮರಗಳು : ಇನ್ನೂ ಮೂರು ದಿನ ಜಿಲ್ಲಾದ್ಯಂತ ಭಾರಿ ಮಳೆ..