ETV Bharat / state

ತೀರ್ಥಹಳ್ಳಿಯಲ್ಲಿ ಎರಡು ಕಾಗೆ ಸಾವು: ಹಕ್ಕಿ ಜ್ವರದ ಭೀತಿ - ಶಿವಮೊಗ್ಗ ಲೇಟೆಸ್ಟ್​ ನ್ಯೂಸ್

ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮದಲ್ಲಿ ಎರಡು ಕಾಗೆಗಳು ಸಾವನ್ನಪ್ಪಿವೆ. ಮೇಲ್ನೋಟಕ್ಕೆ ಕಾಗೆಗಳು ಕರೆಂಟ್ ಶಾಕ್​ನಿಂದ ಸಾವನ್ನಪ್ಪಿವೆ ಎನ್ನಲಾಗಿದ್ದು, ವರದಿ ಬಂದ ನಂತರ ಸಾವಿಗೆ ಕಾರಣ ತಿಳಿದು ಬರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

two-crows-died-in-tirthahalli
ತೀರ್ಥಹಳ್ಳಿಯಲ್ಲಿ ಎರಡು ಕಾಗೆಗಳು ಸಾವು: ಸ್ಥಳೀಯರಲ್ಲಿ ಹಕ್ಕಿ ಜ್ವರದ ಭೀತಿ
author img

By

Published : Jan 8, 2021, 3:54 PM IST

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನ ಕುರುವಳ್ಳಿ ಗ್ರಾಮದಲ್ಲಿ ಎರಡು ಕಾಗೆಗಳು ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿದೆ.

ದೇಶದ ನಾಲ್ಕು ರಾಜ್ಯಗಳಲ್ಲಿ ಈಗಾಗಲೇ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ, ಮೇಲಿನ ಕುರುವಳ್ಳಿ ಗ್ರಾಮದಲ್ಲಿ ಎರಡು ಕಾಗೆಗಳು ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ಸಂತೆ ಗ್ರಾಮ ಪಂಚಾಯಿತಿಯವರು ತಾಲೂಕು ಆಡಳಿತಕ್ಕೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಮಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ, ಕಾಗೆಗಳನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದಾರೆ.

ಮೇಲ್ನೋಟಕ್ಕೆ ಕಾಗೆಗಳು ಕರೆಂಟ್ ಶಾಕ್​ನಿಂದ ಸಾವನ್ನಪ್ಪಿವೆ ಎನ್ನಲಾಗಿದ್ದು, ವರದಿ ಬಂದ ನಂತರ ಸಾವಿಗೆ ಕಾರಣ ತಿಳಿದು ಬರಲಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.