ಶಿವಮೊಗ್ಗ: ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವಿನ ಸಂಖ್ಯೆ ಸಹ ಏರಿಕೆಯಾಗುತ್ತಿದೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಭದ್ರಾವತಿ ಹಾಗೂ ಶಿವಮೊಗ್ಗದ ನಗರದ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ನ ನಿವಾಸಿಯಾದ 80 ವರ್ಷದ ವೃದ್ಧರೊಬ್ಬರನ್ನು ಕಳೆದ ವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.
ಭದ್ರಾವತಿಯ 42 ವರ್ಷದ ವ್ಯಕ್ತಿ ಅನಾರೋಗ್ಯದ ಹಿನ್ನೆಲೆ ಜುಲೈ 9 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಸಹ ಚಿಕಿತ್ಸೆ ಫಲಕಾರಿಯಾಗದೇ ತೀವ್ರ ಜ್ವರದಿಂದ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಆದರೆ ಸರ್ಕಾರಿ ದಾಖಲೆಗಳ ಪ್ರಕಾರ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 4 ಎಂದು ತೋರಿಸಲಾಗುತ್ತಿದೆ.