ETV Bharat / state

ಶಿವಮೊಗ್ಗ: ತುಂಗಾ‌ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರಾಧ್ಯಾಪಕರು ನೀರುಪಾಲು

author img

By

Published : Jun 18, 2023, 4:28 PM IST

Updated : Jun 18, 2023, 5:29 PM IST

ತುಂಗಾನದಿಯಲ್ಲಿ ಈಜಲು ಹೋಗಿ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

two-lecturers-drowned-in-tunga-river-in-shivamogga
ತುಂಗಾ‌ ನದಿಯಲ್ಲಿ ಈಜಲು ಇಳಿದ ಇಬ್ಬರು ಪ್ರಾಧ್ಯಾಪಕರು ನೀರುಪಾಲು

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಪ್ರಾಧ್ಯಾಪಕರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೀರ್ಥ ಮತ್ತೂರು ಗ್ರಾಮದ ಬಳಿ‌ ನಡೆದಿದೆ. ಮೃತರನ್ನು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಪಿಯು ಕಾಲೇಜಿನ ಪ್ರಾಧ್ಯಾಪಕರಾದ ಪುನೀತ್​​ (36) ಹಾಗೂ ಬಾಲಾಜಿ (36) ಎಂದು ಗುರುತಿಸಲಾಗಿದೆ.

ನಿನ್ನೆ ಪ್ರವಾಸಕ್ಕೆಂದು ಬಂದಿದ್ದ ಪುನೀತ್​ ಮತ್ತು ಬಾಲಾಜಿ ಅವರು ತೀರ್ಥಹಳ್ಳಿಯ ಯೋಗಾ ನರಸಿಂಹ ಮಠದ ಬಳಿಯ ಹೋಂ ಸ್ಟೇವೊಂದರಲ್ಲಿ ತಂಗಿದ್ದರು. ಬಳಿಕ ಇಂದು ಬೆಳಗ್ಗೆ ತಿಂಡಿ ತಿಂದು ನದಿಯ ಬಳಿಗೆ ಈಜಲು ಹೋಗಿದ್ದಾರೆ. ಈ ವೇಳೆ ಈಜಲು ನದಿಗಿಳಿದ ಪುನೀತ್ ಅವರು ನದಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಇನ್ನು ಇವರನ್ನು ರಕ್ಷಿಸಲು ಹೋದ ಬಾಲಾಜಿ ಅವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ನಡೆಸಿದ್ದು, ಒಬ್ಬರ ಶವವನ್ನು ಪತ್ತೆ ಮಾಡಲಾಗಿದೆ. ಇನ್ನೊಬ್ಬರ ಪತ್ತೆ ಕಾರ್ಯ ಮುಂದುವರೆದಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :Mysore crime: ಫೇಸ್​ಬುಕ್​ನಲ್ಲಿ ಇಂಥವರೂ ಇರ್ತಾರೆ ಜೋಕೆ.. ಕಾಲ್ ಗಲ್೯ ಆಮಿಷಕ್ಕೆ ಬಲಿಯಾಗಿ ₹ 14 ಲಕ್ಷ ಕಳೆದುಕೊಂಡ 'ಸ್ವಾಮಿ'!

ಪ್ರತ್ಯೇಕ ಪ್ರಕರಣ.. ಯುವತಿಯೊಂದಿಗೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಮುಖಂಡನ ಬಂಧನ : ತೀರ್ಥಹಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದ ವಿದ್ಯಾರ್ಥಿ ಸಂಘಟನೆಯ ಮುಖಂಡನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕು ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಸ್ಥಳೀಯ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದನು. ಈ ಕುರಿತು ತೀರ್ಥಹಳ್ಳಿ ಪೊಲೀಸರು ಸುಮೋಟೂ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ವಿದ್ಯಾರ್ಥಿ ಸಂಘಟನೆ ಮುಖಂಡನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೇವನಹಳ್ಳಿಯಲ್ಲಿ ಕೆರೆಗಿಳಿದ ಬಾಲಕರು ನೀರು ಪಾಲು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಟವಾಡಲು ಕೆರೆಗಿಳಿದಿದ್ದ ಮೂವರು ಬಾಲಕರು ನೀರು ಪಾಲಾಗಿದ್ದರು. ವಿಜಯಪುರ ಪಟ್ಟಣದ ಕಾರ್ತಿಕ್ (16), ಧನುಷ್ (15) ಮತ್ತು ಗುರುಪ್ರಸಾದ್ (6) ಶನಿವಾರ ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆ ಪೋಷಕರು ರಾತ್ರಿಯೆಲ್ಲ ಹುಡುಕಾಟ ನಡೆಸಿದ್ದರು. ಎಲ್ಲೂ ಪತ್ತೆಯಾಗದಾಗ ಪೋಷಕರು ವಿಜಯಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇಂದು ಬೆಳಗ್ಗೆ ಅಮಾನಿಕೆರೆಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ. ನಂತರ ಪೋಷಕರು ಮತ್ತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಮೂವರು ಬಾಲಕರ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಸಂಬಂಧ ವಿಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Shivamogga crime: ಎಕ್ಸಿಕ್ಯೂಟಿವ್‌ ಇಂಜಿನಿಯರ್ ಪತ್ನಿ ಅನುಮಾನಾಸ್ಪದ ಸಾವು

Last Updated : Jun 18, 2023, 5:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.