ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳಾಗಿವೆ.
ಶಿವಮೊಗ್ಗದ ಪ್ರತಿಷ್ಟಿತ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮದೆ ಕಾಲೇಜಿನ ವಿದ್ಯಾರ್ಥಿನಿಯ ಜೊತೆ ಸಂಪರ್ಕ ಬೆಳೆಸಿದ್ದಾರೆ. ಪ್ರಾಂಶುಪಾಲರಿಗೆ 48 ವರ್ಷವಾಗಿದ್ದು, ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದೆ. ಪಾಠ ಮಾಡುವ ವಿದ್ಯಾರ್ಥಿನಿಗೆ ನಂಬಿಸಿ, ಆಕೆಯ ಜೊತೆ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ. ಪ್ರಾಂಶುಪಾಲರು ಕಾಲೇಜಿನಲ್ಲಿ ಚೆನ್ನಾಗಿಯೇ ಪಾಠ ಮಾಡುತ್ತಿದ್ದರು. ಎಲ್ಲಾ ಮಕ್ಕಳು ಪ್ರಾಂಶುಪಾಲರ ಪಾಠವನ್ನು ಚೆನ್ನಾಗಿ ಆಲಿಸುತ್ತಿದ್ದರು. ಇದನ್ನ ಬಳಸಿಕೊಂಡ ಪ್ರಾಂಶುಪಾಲರು 17 ವರ್ಷಷ ಅಪ್ರಾಪ್ತೆಗೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಮೊನ್ನೆ ಸಂಜೆ ಬಾಲಕಿಯ ತನಗೆ ಮೋಸವಾಗಿದೆ ಎಂದು ಅರಿವಾಗಿದೆ. ಬಳಿಕ ಹಾಸ್ಟೆಲ್ನ ತನ್ನ ರೂಂನಲ್ಲಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹಾಸ್ಟಲ್ನ ಇತರ ವಿದ್ಯಾರ್ಥಿಗಳು ನೋಡಿ ವಾರ್ಡನ್ಗೆ ಮಾಹಿತಿ ತಿಳಿಸಿದ್ದರು. ಕೂಡಲೇ ವಾರ್ಡನ್ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಗ ಬಾಲಕಿಯ ಮೇಲೆ ದೌರ್ಜನ್ಯ ನಡೆದಿರುವ ಕುರಿತು ಮಾಹಿತಿ ಬೆಳಕಿಗೆ ಬಂದಿದೆ.
ಬಾಲಕಿಯ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಈ ವಿಷಯ ಕುಟುಂಬಸ್ಥರಿಗೆ ತಿಳಿದಿದೆ. ಈ ಕುರಿತು ಬಾಲಕಿಯ ತಾಯಿ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ. ಬಳಿಕ ಕೋರ್ಟ್ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬಾಲಕಿ ಗರ್ಭಿಣಿ, ಪ್ರಕರಣ ದಾಖಲು: ಹೊಸನಗರ ತಾಲೂಕಿನಲ್ಲಿ ಬಾಲಕಿಯ ಮೇಲೆ ಮಧ್ಯ ವಯಸ್ಕನೊಬ್ಬ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಬಾಲಕಿಯ ಹೊಟ್ಟೆಯಲ್ಲಿ ಇರುವ ಮಗುವನ್ನು ತೆಗೆಯಿಸಲು ಆತ ಹಾವೇರಿ ಜಿಲ್ಲೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಆಕೆಗೆ ಅರ್ಬಾಷನ್ ಮಾಡಿಸಲು ಹೋದಾಗ ಬಾಲಕಿಯ ಆಧಾರ್ ಕಾರ್ಡ್ ಪರಿಶೀಲಿಸಿದ್ದಾರೆ. ಆಧಾರ್ ಕಾರ್ಡ್ನಲ್ಲಿ ಆಕೆ ಇನ್ನು ಅಪ್ರಾಪ್ತಳು ಎಂದು ತಿಳಿದು ಬಂದಿದೆ. ಆಸ್ಪತ್ರೆ ಆಡಳಿತ ಮಂಡಳಿ ತಕ್ಷಣ ಬಾಲಕಿಯನ್ನು ಪೊಲೀಸರಿಗೆ ಒಪ್ಪಿಸಿತ್ತು. ಪೊಲೀಸರು ಎಲ್ಲಾ ವಿಚಾರವನ್ನು ತಿಳಿದುಕೊಂಡು ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾರೆ.
ಇಬ್ಬರನ್ನು ನಗರ ಪೊಲೀಸರ ವಶಕ್ಕೆ ನೀಡಲಾಗಿತ್ತು. ಹೊಸನಗರ ಹಾಗೂ ನಗರ ಪೊಲೀಸ್ ಠಾಣೆಯಲ್ಲಿ ಸರಿಯಾದ ಮಹಿಳಾ ಪೊಲೀಸರು ಇಲ್ಲದ ಕಾರಣ ಇಬ್ಬರನ್ಮು ತೀರ್ಥಹಳ್ಳಿ ಪೊಲೀಸರಿಗೆ ಒಪ್ಪಿಸಲಾಗಿದೆ. ಈ ಕುರಿತು ತೀರ್ಥಹಳ್ಳಿ ಡಿವೈಎಸ್ಪಿ ಅವರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಅನುಸರಿಸಿದ್ದಾರೆ.
ಓದಿ: ನೌಕರಿಯಲ್ಲಿ ಹಿಂಬಡ್ತಿ, 6 ತಿಂಗಳಿಂದ ವೇತನ ಸಿಗದೆ ಸರ್ಕಾರಿ ನೌಕರ ನಾಪತ್ತೆ: ಪೊಲೀಸರಿಗೆ ದೂರು ನೀಡಿದ ಪತ್ನಿ