ಶಿವಮೊಗ್ಗ: ಇಬ್ಬರು ಖತರ್ನಾಕ್ ಮನೆಗಳ್ಳರನ್ನು ಬಂಧಿಸಿ, 50 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಚನ್ನಗಿರಿ ತಾಲೂಕು ಮಾವಿನಕಟ್ಟೆ ಗ್ರಾಮದ ನಾಗರಾಜ ನಾಯ್ಕ (24) ಹಾಗೂ ಗಣೇಶ ನಾಯ್ಕ ( 31) ಬಂಧಿತ ಆರೋಪಿಗಳು. ಇವರಿಂದ 50 ಗ್ರಾಂ ತೂಕದ 2,35,500 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಿಬ್ಬರು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಶೋಕ ನಗರದ ಮನೆಯಲ್ಲಿ 40 ಗ್ರಾಂ ಬಂಗಾರ ಹಾಗೂ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಿಗೆರೆ ಗ್ರಾಮದಲ್ಲಿ 10 ಗ್ರಾಂ ತೂಕದ ಬಂಗಾರ ಕಳ್ಳತನ ಮಾಡಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಇನ್ನು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.