ಶಿವಮೊಗ್ಗ: ಉಗ್ರ ಸಂಘಟನೆಯಲ್ಲಿ ತೊಡಗಿಕೊಂಡಿರುವ ಆರೋಪ ಹಾಗೂ ತುಂಗಾ ನದಿ ದಂಡೆಯ ಮೇಲೆ ಬಾಂಬ್ ತಯಾರಿಸಿ ಅದನ್ನು ನದಿಗೆ ಎಸೆಯುತ್ತಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಇಬ್ಬರ ವಿರುದ್ಧ ಯುಎಪಿಎ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಸೈಯದ್ ಯಾಸೀನ್ ಹಾಗೂ ಮಂಗಳೂರಿನ ಮಾಜ್ರನ್ನು ಬಂಧಿಸಲಾಗಿದೆ. ನಿನ್ನೆ ಯಾಸೀನ್ನನ್ನು ಅವರ ಮನೆ ಸೇರಿದಂತೆ ವಿವಿಧ ಕಡೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಲಾಗಿದೆ ಎಂದರು.
ಇದನ್ನೂ ಓದಿ: ಶಿವಮೊಗ್ಗಕ್ಕೂ ಉಗ್ರರ ನಂಟು: ಶಂಕಿತ ಯುವಕರ ಬಂಧನ - ಎಸ್ಪಿ ಮಾಹಿತಿ
ಮೊನ್ನೆ ದಿನ ಒಂದು ಯುಎಪಿಎ ಕೇಸ್ ದಾಖಲಾಗಿದೆ. ಈ ಕೇಸ್ ಹಿನ್ನೆಲೆಯಲ್ಲಿ ತನಿಖೆ ಮುಂದುವರೆಸಲಾಗಿದೆ. ಶಿವಮೊಗ್ಗ ಸುತ್ತಮುತ್ತ ಭಾಗದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಂಗಳೂರು, ಶಿವಮೊಗ್ಗ ಭಾಗದಲ್ಲಿ ಇನ್ನು ದಾಳಿ ಮಾಡುವುದು ಬಾಕಿ ಇದೆ. ಹಲವು ವಸ್ತುಗಳನ್ನು ಸೀಜ್ ಮಾಡಲಾಗಿದೆ. ಬಂಧಿತರ ಜೊತೆ ಸಂಪರ್ಕದಲ್ಲಿದ್ದವರ ವಿಚಾರಣೆ ಸಹ ಮಾಡಲಾಗುತ್ತದೆ. ಸದ್ಯಕ್ಕೆ ವಿಚಾರಣೆ, ತನಿಖೆ ಮುಂದುವರಿದಿದೆ. ಹೀಗಾಗಿ ಬೇರೆ ಏನೂ ಹೇಳಲು ಆಗುವುದಿಲ್ಲ ಎಂದರು.
ಇದನ್ನೂ ಓದಿ: ಬಾಂಬ್ ತಯಾರಿಸಿ ಪ್ರಾಯೋಗಿಕ ಸ್ಫೋಟಕ್ಕೆ ತುಂಗಾ ನದಿ ಬಳಸಿಕೊಂಡ ಶಂಕಿತ ಉಗ್ರರು!
ಪ್ರಕರಣದ ಇನ್ನೋರ್ವ ಆರೋಪಿ ಮಾಜ್ನನ್ನು ಮಂಗಳೂರಿನಲ್ಲಿ ಬಂಧಿಸಿ, ಆತನ ಮನೆಯನ್ನು ನಿನ್ನೆ ಸರ್ಜ್ ಮಾಡಲಾಗಿತ್ತು. ಆತನನ್ನು ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಲಾಗಿತ್ತು. ಇಂದು ಪ್ರಕರಣದ ತನಿಖಾಧಿಕಾರಿಯಾದ ತೀರ್ಥಹಳ್ಳಿಯ ಡಿವೈಎಸ್ಪಿ ಶಾಂತವೀರ ಅವರು ಮಾಜ್ನನ್ನು ಹೆಚ್ಚಿನ ವಿಚಾರಣೆಗೆ ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂದರು.
ಇದನ್ನೂ ಓದಿ: ಶಂಕಿತ ಉಗ್ರ ಸೈಯ್ಯದ್ ಯಾಸೀನ್ನೊಂದಿಗೆ ವಿವಿಧ ಸ್ಥಳಗಳ ಮಹಜರು ನಡೆಸಿದ ಪೊಲೀಸರು