ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕನ್ನಡಿಗರ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮೊನ್ನೆ ಉದ್ಧವ್ ಠಾಕ್ರೆ ಗಡಿ ವಿಚಾರವಾಗಿ ನೀಡಿರುವ ಹೇಳಿಕೆ ಸರಿಯಲ್ಲ. ಅವರು ಇಂತಹ ಹೇಳಿಕೆಗಳನ್ನು ನೀಡುತ್ತಲೇ ಇರುತ್ತಾರೆ. ಈ ರೀತಿ ಅವಿವೇಕದ ಹೇಳಿಕೆಗಳನ್ನು ಅವರು ನಿಲ್ಲಿಸಬೇಕು ಹಾಗೂ ಈ ವಿಚಾರವಾಗಿ ಉದ್ಧವ್ ಠಾಕ್ರೆ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಓದಿ:ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕ್ಷತ್ರಿಯ ಮರಾಠ ಕ್ಷೇಮಾಭಿವೃದ್ಧಿ ಸಂಘ ಖಂಡನೆ
ಮಹಾರಾಷ್ಟ್ರ ಸಿಎಂ ಹೇಳಿಕೆ ಕುರಿತು ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮತ್ತೊಮ್ಮೆ ಇಂತಹ ವಿವೇಚನೆಯಿಲ್ಲದ ಹೇಳಿಕೆ ನೀಡಿದರೆ ಕನ್ನಡಿಗರು ಮಹಾರಾಷ್ಟ್ರಕ್ಕೆ ನುಗ್ಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.