ಶಿವಮೊಗ್ಗ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಉಜ್ಜನಿಪುರದ ಬಳಿ ಅಪಘಾತ ನಡೆದಿದ್ದು, ಮಂಜುನಾಥ್ ಗೌಡ(35) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಂಜುನಾಥ್ ಗೌಡ ಕೇಬಲ್ ಆಪರೇಟರ್ ಆಗಿದ್ದು, ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಹಿಂಬದಿಯಿಂದ ಬಂದ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.