ETV Bharat / state

ಸೊರಬದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.. ಬಿಎಸ್​ವೈ ಚಾಲನೆ - ETV Bharat kannada News

ಶಿವಮೊಗ್ಗ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

BJP Vijaya Sankalpa Yatra
ಬಿಜೆಪಿ ವಿಜಯ ಸಂಕಲ್ಪ ಯಾತ್ರೆ
author img

By

Published : Mar 19, 2023, 6:20 PM IST

Updated : Mar 20, 2023, 11:42 AM IST

ವಿಜಯ ಸಂಕಲ್ಪ ಯಾತ್ರೆ ಐತಿಹಾಸಿಕ ಕ್ರಾರ್ಯಕ್ರಮ

ಶಿವಮೊಗ್ಗ : ಶಾಸಕ ಕುಮಾರ್ ಬಂಗಾರಪ್ಪ ಅವರ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಯಾತ್ರೆಗೆ ಪಟ್ಟಣದಲ್ಲಿ ಭಾನುವಾರ ಅಭೂತಪೂರ್ವ ಬೆಂಬಲ ದೊರೆಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಾರುವ ಸ್ತಬ್ಧ ಚಿತ್ರಗಳ ಮೆರವಣಿಗೆಯಲ್ಲಿ ದೊಳ್ಳುಕುಣಿತ, ಡಿಜೆ ಹಾಡು ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಶ್ರೀ ರಂಗನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ವಿಜಯ ಸಂಕಲ್ಪ ಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು. ಶ್ರೀ ರಂಗನಾಥ ದೇವಸ್ಥಾನದಿಂದ ಆರಂಭವಾದ ಯಾತ್ರೆ, ಮುಖ್ಯರಸ್ತೆ ಮಾರ್ಗವಾಗಿ ಖಾಸಗಿ ಬಸ್ ನಿಲ್ದಾಣ ಮುಂಭಾಗದ ವೃತ್ತ ತಲುಪಿತು.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಜನತೆಯಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದಲ್ಲಿ ಸುಮಾರು 140 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದರು. ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಕಾರ್ಯಕ್ರಮ ಮಾ.25ರಂದು ದಾವಣಗೆರೆಯಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸಕಲ ಸಿದ್ಧತೆಗಳು ಸಹ ನಡೆಯುತ್ತಿವೆ ಎಂದು ತಿಳಿಸಿದರು.

ಐತಿಹಾಸಿಕ ಕಾರ್ಯಕ್ರಮ : ಬಳಿಕ ಇದೇ ವೇಳೆ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ರಾಜ್ಯದ 224 ಕ್ಷೇತ್ರಗಳಲ್ಲೂ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿರುವುದು ಐತಿಹಾಸಿಕ ಕಾರ್ಯಕ್ರಮವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆ ಮತ್ತು ಮನಗಳಿಗೆ ತಲುಪಿಸುವ ಉದ್ದೇಶದಿಂದ ಯಾತ್ರೆಯನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ರಾಷ್ಟ್ರ, ರಾಜ್ಯದ ನಾಯಕರ ನೇತೃತ್ವದಲ್ಲಿ ಎಲ್ಲಾ ಮೋರ್ಚಾಗಳ ಸಭೆಗಳನ್ನು ಸಹ ನಡೆಸಲಾಗುತ್ತಿದೆ ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಪ್ರಚಾರ ಕಾರ್ಯವನ್ನು ಸಹ ಆರಂಭಿಸಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹೇಳಿದರು.

ಯಾತ್ರೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಕೆ.ಎಸ್. ಈಶ್ವರಪ್ಪ, ಕುಮಾರ್ ಬಂಗಾರಪ್ಪ, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಾಜು ಎಂ. ತಲ್ಲೂರು, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ರಾಜ್ಯ ಸಂಚಾಲಕ ರಾಜೇಂದ್ರ, ಎಸ್. ದತ್ತಾತ್ರಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ ಸೇರಿದಂತೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :ನಾನು ರಿಟೈರ್ಡೂ ಆಗಲ್ಲ, ಟೈಯರ್ಡೂ ಆಗಿಲ್ಲ ಎಂದ ಬಿ.ಎಸ್.ಯಡಿಯೂರಪ್ಪ​

Last Updated : Mar 20, 2023, 11:42 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.