ETV Bharat / state

ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಕಿಮ್ಮನೆ ರತ್ನಾಕರ್ ಕಿಡಿ - upavas sathyagraha

ತೀರ್ಥಹಳ್ಳಿ ತಾಲೂಕು ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿರುವ ಕಿಮ್ಮನೆ ರತ್ನಾಕರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ತಡೆಯುವಲ್ಲಿ ವಿಫಲವಾಗಿವೆ ಎಂದು ಹರಿಹಾಯ್ದಿದ್ದಾರೆ.

upavasa
upavasa
author img

By

Published : Jun 1, 2020, 8:23 PM IST

ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೊರೊನಾ ತಡೆಯುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ತೀರ್ಥಹಳ್ಳಿ ತಾಲೂಕು ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿರುವ ಕಿಮ್ಮನೆ ರತ್ನಾಕರ್, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹರಿಹಾಯ್ದಿದ್ದಾರೆ. ಸಾಗರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್​ಐಆರ್ ದಾಖಲಾಗುವಂತೆ ಬಿಜೆಪಿಯವರು ಮಾಡಿದ್ದಾರೆ. ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ದೂರಿದರು.

ತೀರ್ಥಹಳ್ಳಿ ಶಾಸಕ‌ ಆರಗ ಜ್ಞಾನೇಂದ್ರ ಸರ್ಕಾರಿ ಕಾರ್ಯಕ್ರಮದಲ್ಲಿ ಕೋಮು ಭಾವನೆ ಕೆರಳಿಸುವ ಭಾಷಣ ಮಾಡಿದ್ದು, ಅವರ ವಿರುದ್ಧ ಎಫ್​ಐಆರ್ ದಾಖಲಿಸಬೇಕು ಎಂದರು. ಈ ವೇಳೆ ಸುರೇಶ್ ಅಮ್ರಪಾಲಿ ಸೇರಿದಂತೆ ತೀರ್ಥಹಳ್ಳಿಯ ಬ್ಲಾಕ್ ಕಾಂಗ್ರೆಸ್ ಸದಸ್ಯರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.