ಶಿವಮೊಗ್ಗ: ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ನಾವೆಲ್ಲಾ ಸ್ವಾರ್ಥಿಗಳಾಗುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಳವಳ ವ್ಯಕ್ತಪಡಿಸಿದ್ರು.
ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಕನಕದಾಸರೂ ಸೇರಿದಂತೆ ಸಂಗೊಳ್ಳಿ ರಾಯಣ್ಣ, ಬಸವಣ್ಣ, ಶಂಕರರಾಚಾರ್ಯರು, ಅಂಬೇಡ್ಕರ್ ಮುಂತಾದ ಮಹಾತ್ಮರನ್ನು ಜಾತಿಗೆ ಸೀಮಿತಗೊಳಿಸುತ್ತಿದ್ದೇವೆ. ರಾಜಕಾರಣಿಗಳು ಸ್ವಾರ್ಥರಾಗುತ್ತಿದ್ದಾರೆ. ದಾರ್ಶನಿಕ ವ್ಯಕ್ತಿಗಳು ಕೂಡ ರಾಜಕೀಯಕ್ಕೆ ಬಳಕೆಯಾಗುತ್ತಿರುವುದು ನೋವು ತಂದಿದೆ. ಇಂತಹ ಸ್ವಾರ್ಥ ರಾಜಕಾರಣಿಗಳಿಗೆ ನನ್ನ ದಿಕ್ಕಾರವಿರಲಿ ಎಂದರು.