ಶಿವಮೊಗ್ಗ: ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯವನ್ನು ಜಿಲ್ಲೆಯ ಸಚಿವರು, ಸಂಸದರು ಹಾಗೂ ಶಾಸಕರು ನೆರವೇರಿಸಿದರು.
ಈ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಮಾತನಾಡಿ, ಶಿವಮೊಗ್ಗ ಜಿಲ್ಲೆಗೆ ಒತ್ತು ನೀಡುವಂತೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದ್ದು, ಅದರಂತೆ ಸಚಿವನಾದ ಬಳಿಕ ಜಿಲ್ಲೆಗೆ ಎರಡು ಬಾರಿ ಭೇಟಿ ನೀಡಿದ್ದೇನೆ ಎಂದರು. ಅಲ್ಲದೇ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬಿಟ್ಟು ಪಾಲಿಕೆ ಸದಸ್ಯರು ಕೈಜೋಡಿಸಬೇಕು. ಶಿವಮೊಗ್ಗ ಜಿಲ್ಲೆಯನ್ನು ಅತ್ಯುತ್ತಮ ನಗರವಾನ್ನಾಗಿಸಬೇಕು ಎನ್ನುವುದೇ ನನ್ನ ಉದ್ದೇಶ ಎಂದರು.
ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಎಸ್.ಟಿ.ಸೋಮಶೇಖರ್, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅಶೋಕ್ ನಾಯ್ಕ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.