ಶಿವಮೊಗ್ಗ: ಮತೀಯ ಸಂಘಟನೆಗಳಾದ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಮಾತೃ ಮಂಡಳಿ ದುರ್ಗಾ ವಾಹಿನಿ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾಚಾರದಲ್ಲಿ ಐಎಸ್ಐ ಸಂಘಟನೆಯ ಕೈವಾಡವಿದೆ. ದೇಶದ ಭದ್ರತೆಯನ್ನು ಐಎಸ್ಐ ಹಾಳು ಮಾಡುತ್ತಿದ್ದರೆ. ಎಸ್ಡಿಪಿಐ ದೇಶದ ಒಳಗಡೆ ಹಿಂಸಾತ್ಮಕ ಕೃತ್ಯಗಳನ್ನು ನಡೆಸುತ್ತಿದೆ. ಹಾಗಾಗಿ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ಕೂಡಲೇ ಸರ್ಕಾರ ನಿಷೇಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.