ಶಿವಮೊಗ್ಗ: ರಸ್ತೆ ಬದಿ ತರಕಾರಿ ಮಾರಾಟ ಮಾಡುವ ವ್ಯಾಪಾರಿಗಳು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
35 ವರ್ಷಗಳಿಂದ ಕುವೆಂಪು ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ಬದುಕನ್ನ ಕಟ್ಟಿಕೊಂಡಿದ್ದೇವೆ. ಆದ್ರೆ ಟ್ರಾಫಿಕ್ ಪೊಲೀಸರು ನಮ್ಮನ್ನ ಆ ಸ್ಥಳದಿಂದ ತೆರವುಗೊಳಿಸಿ ಬೀದಿಗೆ ತಂದಿದ್ದಾರೆ ಎಂದು ಆರೋಪಿಸಿ ರಸ್ತೆ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಟ್ರಾಫಿಕ್ ಪೊಲೀಸರ ವಿರುದ್ಧ ಬೀದಿಬದಿ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಕೈಗೊಂಡಿದ್ದಾರೆ. 25 ಕ್ಕೂ ಹೆಚ್ಚು ಕುಟುಂಬಗಳು ರಸ್ತೆ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದೇವೆ. ಇಲ್ಲಿಯವರೆಗೂ ನಾವು ಯಾವುದೇ ತೊಂದರೆ ಮಾಡದೇ ವ್ಯಾಪಾರ ನಡೆಸಿಕೊಂಡು ಹೋಗುತ್ತಿದ್ದೇವೆ. ಆದರೆ ಈಗ ಟ್ರಾಫಿಕ್ ಪೊಲೀಸರು ನಮ್ಮನ್ನು ವ್ಯಾಪಾರ ಸ್ಥಳದಿಂದ ತೆರವುಗೊಳಿಸುವ ಮೂಲಕ ನಮ್ಮನ್ನ ಬೀದಿಗೆ ತಂದಿದ್ದಾರೆ ಎಂದು ಅಳಲು ತೋಡಿಕೊಂಡರು. ನಾವು ಈ ತರಕಾರಿ ವ್ಯಾಪಾರದಲ್ಲಿಯೇ ಬದುಕು ಕಟ್ಟಿಕೊಂಡವರು. ಹಾಗಾಗಿ ಕೂಡಲೇ ನಮಗೆ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸಿದರು.