ಶಿವಮೊಗ್ಗ: ಜಿಲ್ಲೆಯಲ್ಲಿ ಕರ್ಫ್ಯೂ ಉಲ್ಲಂಘಿಸಿ ಓಡಾಡುತ್ತಿದ್ದ 152 ವಾಹನ ವಶಕ್ಕೆ ಪಡೆದು 64 ಸಾವಿರ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ 01,ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 01, ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 01, ವಿನೋಬ ನಗರ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 04 ಪ್ರಕರಣಗಳನ್ನು ದಾಖಲಿಸಲಾಗಿದೆ. ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನ ಸವಾರರ ಒಟ್ಟು 152 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
IMV ಕಾಯ್ದೆ ಅಡಿ ಒಟ್ಟು 152 ಪ್ರಕರಣಗಳನ್ನು ದಾಖಲಿಸಿ ರೂ 64,800 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.