ETV Bharat / state

ಸಾಲ ವಸೂಲಾತಿಗೆ ರೈತರ ಮೇಲೆ ಒತ್ತಡ ಹೇರಬಾರದು: ಶಿವಮೊಗ್ಗ ಜಿಲ್ಲಾಧಿಕಾರಿ - Video Conference by Shimoga DC KB Shivakumar

ರೈತರು ಪಡೆದಿರುವ ಸಾಲವನ್ನು ನಿಗದಿತ ಅವಧಿಯ ಒಳಗಾಗಿ ಕಟ್ಟಲು ಅವರ ಮನವೊಲಿಸಬೇಕು. ಸಾಲ ಪಡೆದಿರುವ ರೈತರ ಮನೆಯ ಎದುರು ಬಂದು ಅವಹೇಳನಕಾರಿಯಾಗಿ ಮಾತನಾಡಿ ಒತ್ತಡ ಹಾಕಬಾರದು. ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

Video Conference by Shimoga DC
ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ವಿಡಿಯೋ ಕಾನ್ಫರೆನ್ಸ್
author img

By

Published : Nov 28, 2019, 9:48 PM IST

ಶಿವಮೊಗ್ಗ: ಸಣ್ಣ ಹಣಕಾಸು ಸಂಸ್ಥೆಗಳು ರೈತರಿಂದ ಸಾಲ ವಸೂಲಾತಿಗೆ ಒತ್ತಡ ಹೇರದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಿದರು. ರೈತರು ಪಡೆದಿರುವ ಸಾಲವನ್ನು ನಿಗದಿತ ಅವಧಿಯ ಒಳಗಾಗಿ ಕಟ್ಟಲು ಅವರ ಮನವೊಲಿಸಬೇಕು. ಸಾಲ ಪಡೆದಿರುವ ರೈತರ ಮನೆಯ ಎದುರು ಬಂದು ಅವಹೇಳನಕಾರಿಯಾಗಿ ಮಾತನಾಡಿ ಒತ್ತಡ ಹಾಕಬಾರದು. ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಸಾಲವನ್ನು ಹಿಂತಿರುಗಿಸದಿದ್ದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಅಂಶವನ್ನು ರೈತರ ಗಮನಕ್ಕೆ ತರಬೇಕು. ವಸೂಲಾತಿಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಆರ್​ಬಿಐ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಕಾನೂನು ವ್ಯಾಪ್ತಿಯಲ್ಲಿ ಸಾಲ ವಸೂಲಾತಿಗೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಣ್ಣ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಸೂಚಿಸಿದರು.

ಸಣ್ಣ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತಪ್ಪು ಮಾಹಿತಿ ನೀಡಿ ಕೆಲವು ಮಧ್ಯವರ್ತಿಗಳು ಕಮಿಷನ್ ಪಡೆದು ವಂಚಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಸಾಲ ಮನ್ನಾಕ್ಕಾಗಿ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗಿ ಮೋಸ ಹೋಗಬಾರದು ಎಂದು ಮನವಿ ಮಾಡಿದರು.

Intro:ಶಿವಮೊಗ್ಗ

ರೈತರಿಂದ ಸಾಲ ವಸೂಲಾತಿಗೆ ಒತ್ತಡ ಹೇರಬಾರದು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಸಣ್ಣ ಹಣಕಾಸು ಸಂಸ್ಥೆಗಳು ರೈತರಿಂದ ಸಾಲ ವಸೂಲಾತಿಗೆ ಒತ್ತಡವನ್ನು ಹೇರದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆಗಳನ್ನು ನೀಡಿದರು.
ರೈತರು ಪಡೆದಿರುವ ಸಾಲವನ್ನು ನಿಗದಿತ ಅವಧಿಯ ಒಳಗಾಗಿ ಕಟ್ಟಲು ಅವರ ಮನವೊಲಿಸಬೇಕು. ಸಾಲ ಪಡೆದಿರುವ ರೈತರ ಮನೆಯ ಎದುರು ಬಂದು ಅವಹೇಳನಕಾರಿಯಾಗಿ ಮಾತನಾಡಿ ಒತ್ತಡ ಹಾಕಬಾರದು. ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು.

ಸಾಲವನ್ನು ಹಿಂತಿರುಗಿಸದಿದ್ದರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಅಂಶವನ್ನು ರೈತರ ಗಮನಕ್ಕೆ ತರಬೇಕು. ವಸೂಲಾತಿಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಆರ್‍ಬಿಐ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ಕಾನೂನು ವ್ಯಾಪ್ತಿಯಲ್ಲಿ ಸಾಲ ವಸೂಲಾತಿಗೆ ಕ್ರಮ ಕೈಗೊಳ್ಳಬೇಕು. ಈ ಕುರಿತು ಸಣ್ಣ ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಅವರು ತಿಳಿಸಿದರು.

ಸಣ್ಣ ಹಣಕಾಸು ಸಂಸ್ಥೆಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತಪ್ಪು ಮಾಹಿತಿ ನೀಡಿ ಕೆಲವು ಮಧ್ಯವರ್ತಿಗಳು ಕಮಿಷನ್ ಪಡೆದು ವಂಚಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಸಾಲಮನ್ನಾಕ್ಕಾಗಿ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗಿ ಮೋಸ ಹೋಗಬಾರದು ಎಂದು ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಉಪವಿಭಾಗಾಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.