ETV Bharat / state

ಪಕ್ಷ ಯಾವುದೇ ಸವಾಲು ನೀಡಿದರೂ ಸ್ವೀಕರಿಸಲು ಸಿದ್ಧ: ವಿಜಯೇಂದ್ರ

ಬಸವಕಲ್ಯಾಣದಲ್ಲಿ ಸ್ಪರ್ಧೆ ಮಾಡಬೇಕೆಂಬ ಒತ್ತಡವಿದೆ. ನಾನಂತೂ ಉಪಚುನಾವಣೆಯ ಆಕಾಂಕ್ಷಿ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

State BJP vice president BY Vijayendra
ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
author img

By

Published : Jan 2, 2021, 10:35 PM IST

ಶಿವಮೊಗ್ಗ: ಬಸವಕಲ್ಯಾಣದಲ್ಲಿ ಸ್ಪರ್ಧೆ ಮಾಡಬೇಕೆಂಬ ಒತ್ತಡವಿದೆ. ನಾನಂತೂ ಉಪ ಚುನಾವಣೆಯ ಆಕಾಂಕ್ಷಿ ಅಲ್ಲ. ಆದರೆ ಪಕ್ಷ ನೀಡುವ ಯಾವುದೇ ಸವಾಲನ್ನು ಸ್ವೀಕರಿಸಲು ಸಿದ್ಧ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ...ರಾಜ್ಯದಲ್ಲಿ ಇನ್ಮುಂದೆ 24x7 ಗಂಟೆ ತೆರೆದಿರಲಿವೆ ವಾಣಿಜ್ಯ ಮಳಿಗೆಗಳು!

ಮುಂಬರುವ ಉಪಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷ ನೀಡುವ ಕೆಲಸವನ್ನು ಮಾಡುತ್ತೇನೆ. ಉಪ ಕದನದ ಸ್ಪರ್ಧೆಗೆ ಸ್ಥಳೀಯರೇ ಸಾಕಷ್ಟು ಆಕಾಂಕ್ಷಿಗಳಿದ್ದು, ಯಾರು ಸ್ಪರ್ಧೆ ಮಾಡಬೇಕೆಂದು ಪಕ್ಷ ನಿರ್ಧರಿಸುತ್ತದೆ ಎಂದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಇದರ ಶ್ರೇಯಸ್ಸು ಕಾರ್ಯಕರ್ತರಿಗೆ ಸೇರಬೇಕು. ಇಂದಿನ ಮತ್ತು ನಾಳೆಯ ಸಭೆಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಉಪಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಕೆ.ಆರ್.ಪೇಟೆ ಹಾಗೂ ಶಿರಾ ಉಪಚುನಾವಣೆಯಲ್ಲಿ ಗೆಲುವು ಇನ್ನಷ್ಟು ಹುರುಪು ಮೂಡಿಸಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.