ETV Bharat / state

ವಿಜಯೇಂದ್ರ ನಾಳೆ ಶಿವಮೊಗ್ಗಕ್ಕೆ: ಜಿಲ್ಲಾ ಬಿಜೆಪಿಯಿಂದ ಬೃಹತ್ ಬೈಕ್​ ರ್ಯಾಲಿ, ಸಮಾವೇಶ ಆಯೋಜನೆ - ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಬಿ ವೈ ವಿಜಯೇಂದ್ರ ಅವರು ನ 29ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾ ಘಟಕದಿಂದ ಅದ್ಧೂರಿ ಸ್ವಾಗತ ನೀಡಲು ಬೃಹತ್ ಬೈಕ್ ರ್ಯಾಲಿ, ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ ಡಿ ಮೇಘರಾಜ್ ಮಾಹಿತಿ ನೀಡಿದ್ದಾರೆ.

BJP State President B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
author img

By ETV Bharat Karnataka Team

Published : Nov 28, 2023, 4:31 PM IST

Updated : Nov 28, 2023, 5:15 PM IST

ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿ ಡಿ ಮೇಘರಾಜ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಬಿ ವೈ ವಿಜಯೇಂದ್ರ ಅವರು ತವರು ಜಿಲ್ಲೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಕೋರಲು ಜಿಲ್ಲಾ ಬಿಜೆಪಿಯಿಂದ ಬೃಹತ್ ರೋಡ್ ಶೋ, ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ ಡಿ ಮೇಘರಾಜ್ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಜಿಲ್ಲಾ ಬಿಜೆಪಿ ಘಟಕದಿಂದ ಅದ್ಧೂರಿಯಾಗಿ ಸ್ವಾಗರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬುಧವಾರ ಬೆಳಗ್ಗೆ ನಗರದ ಬೆಕ್ಕಿನ ಕಲ್ಮಠದ ಆವರಣದಿಂದ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಸ್ವಾಗತ ನೀಡಲಾಗುವುದು ಎಂದರು.

ಬೆಕ್ಕಿನ ಕಲ್ಮಠದಿಂದ ಪ್ರಾರಂಭವಾಗುವ ಬೈಕ್ ರ್ಯಾಲಿಯು ಬಿ ಹೆಚ್ ರಸ್ತೆ, ಶಿವಪ್ಪ‌ನಾಯಕ ವೃತ್ತದ ಮೂಲಕ ನೆಹರು ರಸ್ತೆ, ಟಿ.ಶಿನಪ್ಪ‌ಶೆಟ್ಟಿ ವೃತ್ತ, ದುರ್ಗಿಗುಡಿ ಮುಖ್ಯ ರಸ್ತೆಯ ಮೂಲಕ ಡಾ. ಅಂಬೇಡ್ಕರ್ ವೃತ್ತ, ಸಂಗೊಳ್ಳಿ ರಾಯಣ್ಣ ರಸ್ತೆ, ಲಕ್ಷ್ಮೀ ಟಾಕೀಸ್ ಮುಂಭಾಗದಿಂದ ಹೊರಟು ವಿನೋಬಾನಗರದ ಮೂಲಕ ಆಲ್ಕೊಳ ವೃತ್ತದಿಂದ‌ ಪಿಇಎಸ್​ನ ಪ್ರೇರಣ ಸಭಾಂಗಣದ ಸಮಾವೇಶದ ತನಕ ರ್ಯಾಲಿ ನಡೆಯಲಿದೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಮಾರಂಭ ಮುಗಿದ ಬಳಿಕ ಬೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ತವರು ಕ್ಷೇತ್ರ ಶಿಕಾರಿಪುರದಲ್ಲೂ ಸಮಾವೇಶ: ನ. 30 ರಂದು ತವರು ಕ್ಷೇತ್ರ ಶಿಕಾರಿಪುರದ ಹಳೇ ಸಂತೆ ಮೈದಾನದಲ್ಲಿ ಸಮಾವೇಶ ನಡೆಸಲಾಗುತ್ತದೆ. ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗಮಿಸಲಿದ್ದಾರೆ. ಈ ವೇಳೆ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಡಿ ಎಸ್ ಅರುಣ್ ಹಾಗೂ ರುದ್ರೇಗೌಡ ಸೇರಿದಂತೆ ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಮೇಘರಾಜ್​ ಮಾಹಿತಿ ನೀಡಿದರು.

ಇದನ್ನೂಓದಿ:ಕರ್ನಾಟಕ ಸರ್ಕಾರದ ಗ್ಯಾರಂಟಿ ಸಾಧನೆಯನ್ನು ತೆಲಂಗಾಣದ ಪ್ರಚಾರದಲ್ಲಿ ಬಿಜೆಪಿ ತಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

Last Updated : Nov 28, 2023, 5:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.