ETV Bharat / state

ಶಿವಮೊಗ್ಗ: ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲ, ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

author img

By

Published : Aug 7, 2022, 10:31 AM IST

Updated : Aug 7, 2022, 10:53 AM IST

ಸ್ಮಶಾನಕ್ಕೆ ತೆರಳುವ ರಸ್ತೆ ಜಲಾವೃತವಾಗಿದ್ದು ಶವಗಳ ಅಂತ್ಯಸಂಸ್ಕಾರ ನಡೆಸಲು ಶಿವಮೊಗ್ಗದ ಗ್ರಾಮವೊಂದರಲ್ಲಿ ಜನರು ಪರದಾಡುತ್ತಿದ್ದಾರೆ.

the-villagers-carried-the-dead-body-in-the-water
ಶಿವಮೊಗ್ಗ : ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲದೇ ಶವವನ್ನು ನೀರಿನಲ್ಲೇ ಹೊತ್ತು ಸಾಗಿದ ಗ್ರಾಮಸ್ಥರು

ಶಿವಮೊಗ್ಗ: ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆಯಿಲ್ಲದೇ ಶವವನ್ನು ನೀರಿನಲ್ಲೇ ಹೊತ್ತು ಸಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ ನಡೆಯಿತು. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ (80) ಎಂಬವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಇವರ ಶವವನ್ನು ಗ್ರಾಮಸ್ಥರು ನೀರಿನಲ್ಲಿಯೇ ಹೊತ್ತುಕೊಂಡು ಹೋಗಿ ಸ್ಮಶಾನ ತಲುಪಿ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಶಿವಮೊಗ್ಗ: ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲ, ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

ಪ್ರತಿ ಮಳೆಗಾಲದಲ್ಲಿ ಸ್ಮಶಾನದ ರಸ್ತೆ ಜಲಾವೃತವಾಗುತ್ತಿದೆ. ಹೀಗಾಗಿ ಶವಗಳನ್ನು ಸ್ಮಶಾನಕ್ಕೆ ಸಾಗಿಸುವುದೇ ಸವಾಲಿನ ಕೆಲಸವಾಗುತ್ತಿದೆ. ಮಳೆಗಾಲದಲ್ಲಿ ನಾಲ್ಕೈದು ತಿಂಗಳು ಸ್ಮಶಾನದ ರಸ್ತೆ ಮುಳುಗಡೆಯಾಗುತ್ತಿದೆ. ರಸ್ತೆ ಎತ್ತರಿಸುವಂತೆ ಹಲವು ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದರು.

ಇದನ್ನೂ ಓದಿ: ಗದಗ: ಹೊಟ್ಟೆಯೊಳಗೆ ಬೆಳೆದ ಬೃಹತ್ ಗಡ್ಡೆ, ವೃದ್ಧನ ನರಕಯಾತನೆ

Last Updated : Aug 7, 2022, 10:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.