ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಹೊಸನಗರದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.
ಇಲ್ಲಿನ ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಾರುತಿಯವರನ್ನು ಹೊಸನಗರ ತಾಲೂಕಿನ ರಿಪ್ಪನಪೇಟೆಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸೊನಲೆ ಗ್ರಾಮದ ಸುತ್ತಮುತ್ತಲಿನ ಐದಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಈ ಭಾಗದಲ್ಲಿ ಡಾ.ಮಾರುತಿ ಅವರೊಬ್ಬರೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಅವರನ್ನೂ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಒಂದು ವೇಳೆ ಡಾ.ಮಾರುತಿಯವರ ವರ್ಗಾವಣೆ ರದ್ದು ಮಾಡದೆ ಹೋದ್ರೆ, ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.