ಶಿವಮೊಗ್ಗ: ನಗರದಲ್ಲಿ ಕಿಡಿಗೇಡಿಗಳು ಮತ್ತೆ ತಮ್ಮ ದುಷ್ಕೃತ್ಯ ಮುಂದುವರೆಸಿದ್ದಾರೆ. ಶಿವಮೊಗ್ಗದ ವಾಣಿಜ್ಯ ಕೇಂದ್ರದಲ್ಲಿ ನಿನ್ನೆ ರಾತ್ರಿ ಎರಡು ಮೊಪೆಡ್ ಗಳಿಗೆ ಬೆಂಕಿ ಹಚ್ಚಿದ್ದಾರೆ.
ಗಾಂಧಿ ಬಜಾರ್ನ ಜ್ಯುವೆಲ್ಲರಿ ಅಂಗಡಿ ಮುಂದೆ ನಿಲ್ಲಿಸಿದ್ದ ಎರಡು ಮೊಪೆಡ್ಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡು ಮೊಪೆಡ್ಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.
ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಶಾಂತಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.