ಶಿವಮೊಗ್ಗ: ಕೊರೊನಾ ಮಹಾಮಾರಿಯಿಂದಾಗಿ ಸರ್ಕಾರದ ಆದೇಶದನ್ವಯ ಸರ್ಕಾರಿ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುತ್ತಿದೆ. ಅದರಂತೆ ವಿಶ್ವಕರ್ಮ ಜಯಂತಿಯನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಯಿತು.
ಸಚಿವ ಕೆ.ಎಸ್ ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಪಾಲಿಕೆ ಮೇಯರ್ ಸುವರ್ಣ ಶಂಕರ್, ಮಾಜಿ ಉಪಮೇಯರ್ ಚನ್ನಬಸಪ್ಪ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.