ETV Bharat / state

ಮಧುಬಂಗಾರಪ್ಪ ಜೊತೆ ನಾವೂ ಕಾಂಗ್ರೆಸ್ ಸೇರ್ಪಡೆಯಾಗುತ್ತೇವೆ: ಜಿ.ಡಿ. ಮಂಜುನಾಥ್ - ಮಧುಬಂಗಾರಪ್ಪ ಜೊತೆ ಜೆಡಿಎಸ್​ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಎಸ್.ಬಂಗಾರಪ್ಪನವರು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡಾಗ ಅವರನ್ನು ಬೆಂಬಲಿಸಿ ನಾವು ಸಹ ಜೆಡಿಎಸ್‌ಗೆ ಸೇರಿದ್ದೆವು. ಈಗ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಿದ್ದೇವೆ. ಇಂದೇ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದಿನಿಂದಲೇ ನಾವು ಕಾಂಗ್ರೆಸ್ಸಿಗರು ಎಂದು ಜಿ.ಡಿ. ಮಂಜುನಾಥ್ ಹೇಳಿದರು.

we-will-join-congress-with-madhubangarappa-gd-manjunath
ಜಿ.ಡಿ. ಮಂಜುನಾಥ್
author img

By

Published : Apr 3, 2021, 5:17 AM IST

Updated : Apr 3, 2021, 5:37 AM IST

ಶಿವಮೊಗ್ಗ: ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ ಶಿವಮೊಗ್ಗ ನಗರ ಹಾಗೂ ಕುಂಸಿ ಭಾಗದ ಜೆಡಿಎಸ್ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದೇವೆ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಜಿ.ಡಿ.ಮಂಜುನಾಥ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್.ಬಂಗಾರಪ್ಪನವರು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡಾಗ ಅವರನ್ನು ಬೆಂಬಲಿಸಿ ನಾವು ಸಹ ಜೆಡಿಎಸ್‌ಗೆ ಸೇರಿದ್ದೆವು. ಈಗ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಿದ್ದೇವೆ ಎಂದ ಅವರು, ಇಂದೇ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದಿನಿಂದಲೇ ನಾವು ಕಾಂಗ್ರೆಸ್ಸಿಗರು ಎಂದರು.

ಮಧುಬಂಗಾರಪ್ಪ ಜೊತೆ ನಾವೂ ಕಾಂಗ್ರೆಸ್ ಸೇರ್ಪಡೆಯಾಗುತ್ತೇವೆ: ಜಿ.ಡಿ. ಮಂಜುನಾಥ್

ಸಮಾಜವಾದಿ ನೆಲೆಯಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆಯಲ್ಲಿ ಜ್ಯಾತ್ಯಾತೀತ ಪಕ್ಷಗಳು ಜಯಭೇರಿ ಬಾರಿಸುತ್ತಿದ್ದವು. ಆದರೆ ಇಂದು ಬಿಜೆಪಿ ದೊಡ್ಡಮಟ್ಟದಲ್ಲಿ ಬೆಳೆಯುತ್ತಿದೆ. ಇದರಿಂದಾಗಿ ಜ್ಯಾತ್ಯಾತೀತ ಪಕ್ಷಗಳಿಗೆ ಹಿನ್ನಡೆಯಾಗಿರುವುದರಿಂದ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಬಲತುಂಬಲು ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುತ್ತಿದ್ದು, ಇವರನ್ನು ಬೆಂಬಲಿಸಿ ಜಿಲ್ಲೆಯ ಬಹುತೇಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದೇವೆ ಎಂದು ಹೇಳಿದರು.

ದೊಡ್ಡಮಟ್ಟದ ಸಮಾವೇಶ ನಡೆಸಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಬೇಕಿತ್ತು. ಆದರೆ ಕೊರೊನಾ ಹಿನ್ನೆಲೆ ಈ ಸಮಾವೇಶವನ್ನು ಮುಂದೂಡಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹ ಮಧು ಬಂಗಾರಪ್ಪನವರನ್ನು ಬೆಂಬಲಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. 30 ವರ್ಷದ ಜೆಡಿಎಸ್ ಒಡನಾಟವನ್ನು ಇಂದು ಕಳೆದುಕೊಂಡಿದ್ದೇವೆ ಎಂದ ಅವರು ಇಲ್ಲಿಯವರೆಗೆ ಸಹಕಾರ ನೀಡಿದ ಜೆಡಿಎಸ್ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜ, ಬಿ.ತೇಜಪ್ಪ, ನಾಗರಾಜ್, ಕೃಷ್ಣಮೂರ್ತಿ, ರಾಜಶೇಖರ್, ನಾಗೇಗೌಡ, ಉದಯ್ ಕುಮಾರ್, ಸದಾಶಿವ, ಮಮತಾ, ಸುದರ್ಶನ್, ರಾಮಣ್ಣ ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ: ಸರ್ಕಾರದ ಹೊಸ ಕೊರೊನಾ ಮಾರ್ಗಸೂಚಿಗೆ ಜಿಮ್ ಮಾಲೀಕರ ಸಂಘ ಆಕ್ರೋಶ

Last Updated : Apr 3, 2021, 5:37 AM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.