ETV Bharat / state

ರಾಜ್ಯದಲ್ಲಿ ಸಪ್ತಪದಿ ಯೋಜನೆ ಪುನಾರಂಭ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೋವಿಡ್​ ಕಾರಣಗಳಿಂದ ಸ್ಥಗಿತಗೊಂಡಿದ್ದ ಸಪ್ತಪದಿ ಮಹತ್ವಾಕಾಂಕ್ಷಿ ಯೋಜನೆಯನ್ನು ಪುನಾರಂಭಗೊಳಿಸಲು ಸಚಿವರು ಮುಂದಾಗಿದ್ದಾರೆ. ಈ ಸಂಬಂಧ ರಾಜ್ಯದ 100 ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದಲೇ ಸರಳ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆಯಂತೆ. ಈ ಕುರಿತಂತೆ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

Kota Srinivasa Pujari
ಕೋಟಾ ಶ್ರೀನಿವಾಸ ಪೂಜಾರಿ
author img

By

Published : Jul 21, 2021, 7:39 PM IST

ಶಿವಮೊಗ್ಗ: ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಕೊರೊನಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಸಪ್ತಪದಿ ಮಹತ್ವಾಕಾಂಕ್ಷಿ ಯೋಜನೆಯನ್ನು ಪುನಾರಂಭಗೊಳಿಸಲು ಉದ್ದೇಶಿಸಿದ್ದು, ರಾಜ್ಯದ 100 ಆಯ್ದ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದಲೇ ಸರಳ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸಪ್ತಪದಿ ಯೋಜನೆ ಪುನಾರಂಭ ಕುರಿತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ

ಇಂದು ನಗರದ ಕೋಟೆ ಶ್ರೀಸೀತಾರಾಮಾಂಜನೇಯ ದೇವಸ್ಥಾನಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಭೇಟಿ ನೀಡಿ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಮಾಲೋಚನೆ ನಡೆಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಪ್ತಪದಿ ಯೋಜನೆಯಡಿ ಮದುವೆಯಾಗುವ ವಧುವಿಗೆ 40 ಸಾವಿರ ರೂ. ಮೌಲ್ಯದ ಚಿನ್ನ, 10 ಸಾವಿರ ರೂ. ನಗದು, ಧಾರೆ ಸೀರೆ ಮತ್ತು ವರನಿಗೆ 5 ಸಾವಿರ ರೂ.ಗಳ ನಗದು ಹಣವನ್ನು ನೀಡಲಾಗುವುದು. ಈ ಮಂಗಳ ಕಾರ್ಯಗಳಿಗೆ ಈಗಾಗಲೇ ಮುಹೂರ್ತಗಳನ್ನು ನಿಗದಿಪಡಿಸಲಾಗಿದೆ. ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಮಾಹಿತಿ ನೀಡಿದ್ರು.

ಓದಿ: Covid-19 Karnataka Update : 1639 ಮಂದಿಗೆ ಕೋವಿಡ್​​ ಸೋಂಕು, 36 ಮಂದಿ ಸಾವು

ಜನಸಾಮಾನ್ಯರು ಇತ್ತೀಚಿನ ದಿನಗಳಲ್ಲಿ ಆಡಂಬರದ ಮದುವೆಗಿಂತ ಸರಳ ಮದುವೆಗಳತ್ತ ಮನಸು ಮಾಡುತ್ತಿದ್ದಾರೆ. ಇದರಿಂದಾಗಿ ಕಾರ್ಯಕ್ರಮಕ್ಕೆ ಮಹತ್ವ ಹೆಚ್ಚಾಗಾಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.