ಶಿವಮೊಗ್ಗ: ಮನೆಯಲ್ಲಿ ಯಾರು ಇಲ್ಲದ ವೇಳೆ ದಂಪತಿ ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗರದಹಳ್ಳಿ ಕ್ಯಾಂಪ್ನಲ್ಲಿ ನಡೆದಿದೆ.
ಭದ್ರಾವತಿ ತಾಲೂಕು ಆಗರದಹಳ್ಳಿ ಕ್ಯಾಂಪ್ನ ಸಂತೋಷ್ ಹಾಗೂ ಅವರ ಪತ್ನಿ ಪಾರ್ವತಿ ನಿನ್ನೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದೂವರೆ ವರ್ಷದ ಹಿಂದೆ ಇಬ್ಬರು ಹಿರಿಯರ ಒಪ್ಪಿಗೆಯ ಮೇರೆಗೆ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ.
ಭಾನುವಾರ ಶೀಗೆ ಹುಣ್ಣಿಮೆ ಪೂಜೆಗೆಂದು ಮನೆಯ ಸದಸ್ಯರೆಲ್ಲಾ ತೋಟಕ್ಕೆ ತೆರಳಿದ್ದ ವೇಳೆ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಮನಯವರೆಲ್ಲಾ ವಾಪಸ್ ಬಂದಾಗ ಮನೆ ಬಾಗಿಲು ಹಾಕಿತ್ತು. ಕಿಟಕಿ ತೆರೆದು ನೋಡಿದಾಗ ಇಬ್ಬರು ನೇಣು ಹಾಕಿಕೊಂಡಿರುವುದು ತಿಳಿದು ಬಂದಿದೆ. ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.