ಶಿವಮೊಗ್ಗ: ''ಶರಾವತಿ ಹಿನ್ನೀರಿನಲ್ಲಿ ನೀರು ಕಡಿಮೆ ಮಾಡಿದ್ದು ನಾವು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಹಿನ್ನೀರಿನಲ್ಲಿ ನಾವು ನೀರು ಕಡಿಮೆ ಮಾಡಲು ಆಗುತ್ತದೆಯೇ'' ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದ್ದಾರೆ.
ಶಿವಮೊಗ್ಗದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಕೇಂದ್ರದ ಬಿಜೆಪಿ ನರೇಂದ್ರ ಮೋದಿ ಸರ್ಕಾರಕ್ಕೆ 9 ವರ್ಷಗಳ ಪೂರೈಕೆ ಹಿನ್ನೆಲೆಯಲ್ಲಿ, ವರ್ತಕರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ''ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನ ವಿಚಾರವಾಗಿ ಸಂಬಂಧಪಟ್ಟ ಸಚಿವರ ಬಳಿ ಚರ್ಚೆ ನಡೆಸಿದ್ದೇನೆ ಎಂದರು. ನೂತನ ಹೆದ್ದಾರಿ ನಿರ್ಮಾಣದ ಬಗ್ಗೆಯೂ ಸಚಿವರಾದ ನಿತಿನ್ ಗಡ್ಕರಿಯವರ ಬಳಿ ಚರ್ಚೆ ನಡೆಸಲಾಗಿದೆ. ಶಿವಮೊಗ್ಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಬಗ್ಗೆಯೂ ಚರ್ಚೆ ಮಾಡಿದ್ದೇನೆ'' ಎಂದು ತಿಳಿಸಿದರು.
ಇದನ್ನೂ ಓದಿ: ಇಂದಿನ ಬಿಜೆಪಿಗೆ ತತ್ವ ಸಿದ್ಧಾಂತವಿಲ್ಲ.. ಲೋಕಸಭೆ ಚುನಾವಣೆಗೂ ಕೆಆರ್ಪಿಪಿ ಸ್ಪರ್ಧೆ: ಜನಾರ್ದನ್ ರೆಡ್ಡಿ
ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಕ್ಕೆ ತಿರುಗೇಟು ನೀಡಿದ ಸಂಸದ ರಾಘವೇಂದ್ರ ಅವರು, ''ಶರಾವತಿ ಹಿನ್ನೀರಿನಲ್ಲಿ ನಾವು ನೀರು ಕಡಿಮೆ ಮಾಡಿದ್ದೇವೆ ಎಂದು ಬೇಳೂರು ಗೋಪಾಲಕೃಷ್ಣ ಆರೋಪ ಮಾಡಿದ್ದಾರೆ. ಆ ಪುಣ್ಯಾತ್ಮ ಅದ್ಯಾಕೆ ಆ ರೀತಿ ಆರೋಪ ಮಾಡಿದ್ದಾರೋ ಗೊತ್ತಿಲ್ಲ. ಶರಾವತಿ ಹಿನ್ನೀರಿನಲ್ಲಿ ಸೇತುವೆ ನಿರ್ಮಾಣಕ್ಕೆ ನೀರು ಕಡಿಮೆ ಮಾಡಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಸೇತುವೆ ನಿರ್ಮಾಣ ಮಾಡಲು, ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಲು ನಮಗೆ ನೀರು ಬೇಕು. ನೀರು ನಾವು ಕಡಿಮೆ ಮಾಡಲು ಆಗುತ್ತದೆಯೇ ಎಂದರು.
ಇದನ್ನೂ ಓದಿ: Guarantee scheme: ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ''ಅಭಿವೃದ್ಧಿ ವಿಚಾರದಲ್ಲಿ ಯಾರು ರಾಜಕಾರಣ ಮಾಡಬಾರದು. ಶಿವಮೊಗ್ಗದ ವಿಮಾನ ನಿಲ್ದಾಣದಿಂದ ಲಾಭ ಆಗಲಿದೆ. ಶಿವಮೊಗ್ಗದಿಂದ ಹಲವಾರು ಜನರು ದೆಹಲಿಗೆ ಸಂಚರಿಸುತ್ತಾರೆ. ಪ್ರವಾಸೋದ್ಯಮ, ಕೈಗಾರಿಕಾ ವಲಯ ಅಭಿವೃದ್ಧಿಗೆ ಇದು ಪೂರಕವಾಗಲಿದೆ. ಈಗಾಗಲೇ ನಾವು ಇಂಡಿಗೋ ಸಂಸ್ಥೆಗೆ ಸಬ್ಸಿಡಿ ನೀಡಿದ್ದೇವೆ. ಆಗಸ್ಟ್ 8ರಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸಂಪುಟ ಸಭೆಯ ಎಲ್ಲ ನಿರ್ಧಾರಗಳೂ ಜನ ವಿರೋಧಿ, ಜನರಿಂದಲೇ ತಕ್ಕ ಪಾಠ: ಅಶ್ವತ್ಥನಾರಾಯಣ ಗರಂ
ರೈಲ್ವೆ ಕ್ಷೇತ್ರದಲ್ಲೂ ಕೂಡ ಮಹತ್ತರ ಬದಲಾವಣೆಯಾಗಿವೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರಿಗೆ ನೂತನ ರೈಲು ಸಂಪರ್ಕ ಕಲ್ಪಿಸಲಾಗುತ್ತಿದೆ. ಇದರಿಂದ 10 ಜಿಲ್ಲೆಗಳಿಗೆ ಸಂಪರ್ಕ ಸಾಧ್ಯವಾಗಲಿದೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಆಗುವುದರಲ್ಲಿ ಅನುಮಾನವೇ ಇಲ್ಲ'' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಜಿಲ್ಲಾ ಬಿಜೆಪಿಯ ಪ್ರಮುಖರು ಹಾಜರಿದ್ದರು.
ಇದನ್ನೂ ಓದಿ: Electricity rate hike: ವಿದ್ಯುತ್ ದರ ಹೆಚ್ಚಳದ ವಿರುದ್ಧ ಎಂಎಸ್‌ಎಂಇಗಳಿಂದ ಪ್ರತಿಭಟನೆಯ ಎಚ್ಚರಿಕೆ