ಶಿವಮೊಗ್ಗ: ನಗರದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಮಾರ್ಚ್ 23ರಂದು ಅಪರೂಪವೆಂಬಂತೆ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದ ಭದ್ರಾವತಿ ತಾಲೂಕು ತಡಸ ಗ್ರಾಮದ ಅಲ್ಮಾಸ್ ಬಾನು ಆರೋಗ್ಯವಂತ ಮಕ್ಕಳೊಂದಿಗೆ ಮನೆಗೆ ಮರಳಿದ್ದಾರೆ.
ಮಕ್ಕಳ ತೂಕ ಕಡಿಮೆ ಹಾಗೂ ಅಲ್ಪ ಪ್ರಮಾಣದ ಉಸಿರಾಟದ ತೊಂದರೆ ಇದ್ದಿದ್ದರಿಂದ ನವಜಾತ ಶಿಶುಗಳನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಇಬ್ಬರು ಶಿಶುಗಳಿಗೆ ಸಿಪ್ಯಾಪ್ ಅಳವಡಿಸಿ, ಇನ್ನೆರಡು ಶಿಶುಗಳಿಗೆ ಆಕ್ಸಿಜನ್, ಕಾಂಗೂರು ಮದರ್ ಕೇರ್ ಹಾಗೂ ಆಗಾಗ ಸೂಕ್ತ ಚಿಕಿತ್ಸೆ ನೀಡುವುದರ ಮೂಲಕ ಎದೆ ಹಾಲು ನೀಡಲಾಯಿತು. ಈಗ ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಪೆರಿಫೆರೆಲ್ ರಿಂಗ್ ರಸ್ತೆ ಇನ್ನಷ್ಟು ವಿಳಂಬ: ರಿ-ಟೆಂಡರ್ ಕರೆಯಲು ಮುಂದಾದ ಬಿಡಿಎ