ಶಿವಮೊಗ್ಗ: ಅಪರಿಚಿತ ಮಹಿಳೆಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ.
ಹಿತ್ತಲ ಗ್ರಾಮದ ಭತ್ತದ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಗುರುತು ತಿಳಿದುಬಂದಿಲ್ಲ. ಸುಮಾರು 55 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕಾಮಿಸಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.