ETV Bharat / state

ಹಥ್ರಾಸ್​ನಲ್ಲಿ ಯುವತಿ ಅತ್ಯಾಚಾರ ಪ್ರಕರಣ: ಶಿವಮೊಗ್ಗ ವುಮೆನ್​ ಸಂಘಟನೆ ಪ್ರತಿಭಟನೆ - protest in shimogha

ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಮಾಡಿರುವ ಪಾಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ವುಮೆನ್​​ ಸಂಘಟನೆ ಪ್ರತಿಭಟನೆ ನಡೆಸಿದೆ.

women protest in shimogha against up rape case
ಶಿವಮೊಗ್ಗ ವುಮೆನ್​ ಸಂಘಟನೆ ಪ್ರತಿಭಟನೆ
author img

By

Published : Oct 3, 2020, 5:42 PM IST

ಶಿವಮೊಗ್ಗ: ಉತ್ತರ ಪ್ರದೇಶದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಶಿವಮೊಗ್ಗ ವುಮೆನ್​ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ವುಮೆನ್​ ಸಂಘಟನೆಯಿಂದ ಪ್ರತಿಭಟನೆ
ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಮಾಡಿರುವ ದುಷ್ಕರ್ಮಿಗಳಿಗೆ ಯಾವುದೇ ವಿಚಾರಣೆ ನಡೆಸದೇ ಸಾರ್ವಜನಿಕ ಸ್ಥಳದಲ್ಲಿ ನೈಸರ್ಗಿಕ ನ್ಯಾಯದಡಿ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಆದರೂ ಸರ್ಕಾರಗಳು ಇದುವರೆಗೂ ಯಾವುದೇ ಕಠಿಣ ಕಾನೂನು ರೂಪಿಸಿಲ್ಲ, ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆ ಕಳೆದುಹೋಗುತ್ತಿದೆ. ಈಗಲಾದರೂ ಈ ಆರೋಪಿಗಳನ್ನು ಯಾವುದೇ ವಿಚಾರಣೆ ಮಾಡದೇ ಸಾರ್ವಜನಿಕ ಸ್ಥಳದಲ್ಲಿ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.