ಶಿವಮೊಗ್ಗ: ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಕೆ.ಎ.ಎಸ್, ಐಎಎಸ್, ಐಪಿಎಸ್, ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ಮತ್ತು ತಿಳುವಳಿಕೆ ಕಾರ್ಯಾಗಾರವನ್ನು ನಗರದ ಸರ್ಕಾರಿ ನೌಕರ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಅನುರಾಧ, ಗುರಿ, ಛಲ, ಶ್ರಮ ಮತ್ತು ತಂದೆ ತಾಯಿ ಆರ್ಶೀವಾದ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಅದಕ್ಕಾಗಿ ಕಷ್ಟ ಪಡಬೇಕು, ಆಗ ಮಾತ್ರ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗಬಹುದು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಠವಾದ ಪ್ರತಿಭೆಗಳಿವೆ. ಅವುಗಳನ್ನು ಅನಾವರಣಗೊಳಿಸಲು ಮಾಹಿತಿ ನೀಡುವ ವೇದಿಕೆಗಳು ಬೇಕು. ಅಂತಹ ವೇದಿಕೆಗಳೇ ಈ ಕಾರ್ಯಗಾರಗಳು ಎಂದರು.
ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ವೈಶಾಲಿ, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಉಪಸ್ಥಿತರಿದ್ದರು.