ಶಿವಮೊಗ್ಗ : ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರಿಹಾರದ ಚೆಕ್ ಅನ್ನು ಮಾಜಿ ಸಿಎಂ ಬಿ ಎಸ್ಯಡಿಯೂರಪ್ಪನವರು ವಿತರಿಸಿದರು.
ಶಿಕಾರಿಪುರದ ತಾಲೂಕು ಪಂಚಾಯತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್‌ನಿಂದ ಸಾವನ್ನಪ್ಪಿದ ಕುಟುಂಬಗಳಿಗೆ ಸುಮಾರು ಒಂದು ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಹಾಜರಿದ್ದರು.
ಶಿವಮೊಗ್ಗದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಮೃತ ಕುಟುಂಬದವರಿಗೆ ಪರಿಹಾರದ ಚೆಕ್ ವಿತರಿಸಿದರು. ಚೆಕ್ ಪಡೆಯುವ ವೇಳೆ ಅಳುತ್ತಿದ್ದ ಮಹಿಳೆಯನ್ನು ಸಚಿವರು ಸಮಾಧಾನ ಪಡಿಸಿ ಚೆಕ್ ನೀಡಿದರು.
ನಿನ್ನೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ತಮ್ಮ ಸ್ವಕ್ಷೇತ್ರ ತೀರ್ಥಹಳ್ಳಿಯ ತಹಶೀಲ್ದಾರ್ ಕಚೇರಿಯಲ್ಲಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಸಾಗರದಲ್ಲಿ ಹರತಾಳು ಹಾಲಪ್ಪ, ಸೊರಬದಲ್ಲಿ ಕುಮಾರ್ ಬಂಗಾರಪ್ಪ ಚೆಕ್ ವಿತರಿಸಿದ್ದಾರೆ ಎಂದು ತಿಳಿದು ಬಂದಿದೆ.