ಶಿವಮೊಗ್ಗ: ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಆಯನೂರು ಬಳಿಯ ಚಾಮುಂಡಿಪುರದಲ್ಲಿ ನಡೆದಿದೆ.
ಆದೀಲ್(18) ಸಾವನ್ನಪ್ಪಿದ ಯುವಕ. ಆದೀಲ್ ಶಿವಮೊಗ್ಗದ ಟಿಪ್ಪು ನಗರದ ನಿವಾಸಿ. ಈತ ತನ್ನ ಮಾವನ ಶುಂಠಿ ಕಣದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಓದಿ:ಶಿವಮೊಗ್ಗದಲ್ಲಿ ಗಾಳಿ ಸಹಿತ ಮಳೆ : ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
ತನ್ನ ತಾಯಿಯ ತಮ್ಮ ಜಾಕೀರ್ ಅವರ ಶುಂಠಿ ಕಣದಲ್ಲಿ ಕೆಲಸ ಮಾಡುವಾಗ ಆದೀಲ್ ಸಾವಿಗೀಡಾಗಿದ್ದಾನೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.