ಶಿವಮೊಗ್ಗ : ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಘಟಕ ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸಿದೆ.
ನಗರದ ಅಶೋಕ ವೃತ್ತದಲ್ಲಿ ಹೂ,ಹಣ್ಣು, ಪಕೋಡಾ ಮಾರಿ ಅಣಕು ಪ್ರದರ್ಶನ ಮಾಡಿದ ಯುವಕರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಕ್ಕೆ ಬರುವ ಮೊದಲು ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮೂಲಕ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದಿದ್ದರು.
ಇದೀಗ 7 ವರ್ಷಗಳ ಅಧಿಕಾರ ನಡೆಸಿರುವ ಬಿಜೆಪಿ, ಯಾವುದೆ ಉದ್ಯೋಗಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡದೆ ಯುವಕರಿಗೆ ಅನ್ಯಾಯ ಮಾಡಿದೆ ಎಂದು ದೂರಿದರು. ಉದ್ಯೋಗ ನೀಡುವುದನ್ನು ಬಿಟ್ಟು ಕೋಮುಭಾವನೆಗಳ ವಿಚಾರವಾಗಿ ಯುವಕರನ್ನು ದಾರಿ ತಪ್ಪಿಸಿ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಶೇ.10ರಷ್ಟು ಏರಿಕೆ ಮಾಡಿದೆ.
ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಯಾವುದೇ ಯೋಜನೆಗಳನ್ನು ನೀಡುತ್ತಿಲ್ಲ. ಇದನ್ನು ಪ್ರಶ್ನಿಸುವವರ ಮೇಲೆ ಕೇಸ್ ದಾಖಲಿಸಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: 'ಹಿಂದೂ ದೇವಾಲಯ ಮುಟ್ಟಿದ್ರೇ ಬೀದಿಯಲ್ಲಿ ಡಿಸಿ, ತಹಶೀಲ್ದಾರ್ ಹೆಣ ಬೀಳುತ್ತೆ'